
ನವದೆಹಲಿ – ‘ರಾಯಿಟರ್ಸ್’ ಸುದ್ದಿ ಸಂಸ್ಥೆಯು ವರದಿ ಮಾಡಿರುವಂತೆ, ಸಂಯುಕ್ತ ಅರಬ್ ಅಮೀರತ್ (UAE) ಭಾರತದ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿ ‘ಬ್ರಹ್ಮೋಸ್’ ಮತ್ತು ವಾಯು ರಕ್ಷಣಾ ವ್ಯವಸ್ಥೆ ‘ಆಕಾಶ್‌ತೀರ್’ ಅನ್ನು ಖರೀದಿಸಲು ಭಾರತ ಸರಕಾರದೊಂದಿಗೆ ಮಾತುಕತೆ ನಡೆಸುತ್ತಿದೆ. ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಮೀರತ್ ಸ್ವತಃ ಈ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಆಸಕ್ತಿ ವ್ಯಕ್ತಪಡಿಸಿದೆ. ‘ಬ್ರಹ್ಮೋಸ್’ ಕ್ಷಿಪಣಿಯನ್ನು ಅಮೀರತ್‌ಗೆ ಮಾರಾಟ ಮಾಡುವ ಮೊದಲು ಭಾರತವು ರಷ್ಯಾದ ಅನುಮತಿಯನ್ನು ಪಡೆಯಬೇಕಾಗುತ್ತದೆ; ಏಕೆಂದರೆ ಇದನ್ನು ಭಾರತ ಮತ್ತು ರಷ್ಯಾ ಜಂಟಿಯಾಗಿ ನಿರ್ಮಿಸಿವೆ. ಅಮೀರತ್‌ನೊಂದಿಗೆ ರಷ್ಯಾ ಉತ್ತಮ ಸಂಬಂಧವನ್ನು ಹೊಂದಿರುವ ಕಾರಣ, ಈ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ.
290 ಕಿ.ಮೀ. ದಾಳಿ ಮಾಡುವ ಸಾಮರ್ಥ್ಯವಿರುವ ಈ ಕ್ಷಿಪಣಿಯನ್ನು ವಿಯೆಟ್ನಾಂ ಮತ್ತು ಇಂಡೋನೇಷಿಯಾಗಳಿಗೆ ಮಾರಾಟ ಮಾಡಲು ಭಾರತ ಈಗಾಗಲೇ ಒಪ್ಪಂದ ಮಾಡಿಕೊಂಡಿದೆ. ಇದೀಗ ಥೈಲ್ಯಾಂಡ್, ದಕ್ಷಿಣ ಆಫ್ರಿಕಾ, ಬ್ರೆಜಿಲ್ ಮತ್ತು ಚಿಲಿ ದೇಶಗಳೊಂದಿಗೆ ಮಾರಾಟದ ಕುರಿತು ಮಾತುಕತೆ ನಡೆಯುತ್ತಿದೆ. ಭಾರತವು ಈಗಾಗಲೇ ಫಿಲಿಪೈನ್ಸ್‌ಗೆ ಬ್ರಹ್ಮೋಸ್ ಕ್ಷಿಪಣಿಯನ್ನು ಮಾರಾಟ ಮಾಡಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು