
ಮುಂಬಯಿ, ಜೂನ್ ೨೩ (ಸುದ್ದಿ) – ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲಾಗುವುದು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸೂಚನೆಯ ಮೇರೆಗೆ, ಸಮಾನ ನಾಗರಿಕ ಸಂಹಿತೆಯ ಕರಡನ್ನು ಸಿದ್ಧಪಡಿಸಲು ಮುಂಬಯಿ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು. ಈ ಸಮಿತಿಯ ವರದಿ ಬಂದ ನಂತರ ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲು ಸರಕಾರ ಸಕಾರಾತ್ಮಕವಾಗಿದೆ, ಎಂದು ಗೃಹ ರಾಜ್ಯ ಸಚಿವ (ನಗರ) ಯೋಗೇಶ್ ಕದಮ್ ಅವರು ಜೂನ್ ೨೩ ರಂದು ವಿಧಾನಸಭೆಯಲ್ಲಿ ಮಾಹಿತಿ ನೀಡಿದರು. ಭಾಜಪದ ಶಾಸಕಿ ಸೌ. ದೇವಯಾನಿ ಫರಾಂದೆ ಅವರು ‘ರಾಜ್ಯದಲ್ಲಿ ತ್ರಿವಳಿ ತಲಾಖ್‌ನಂತಹ ಕೆಟ್ಟ ಪದ್ಧತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,’ ಎಂದು ವಿಧಾನಸಭೆಯಲ್ಲಿ ಗಮನಸೆಳೆಯುವ ಸೂಚನೆ ಮಂಡಿಸಿದ್ದರು. ಈ ಸೂಚನೆಗೆ ಉತ್ತರಿಸಿದ ರಾಜ್ಯ ಸಚಿವ ಯೋಗೇಶ ಕದಮ್ ಅವರು, “ಸಮಾನ ನಾಗರಿಕ ಸಂಹಿತೆಯು ಎಲ್ಲಾ ಧರ್ಮದವರಿಗೂ ಅನ್ವಯಿಸಲಿದೆ. ಇದರ ಮೂಲಕ ಮುಸ್ಲಿಂ ಧರ್ಮದಲ್ಲಿರುವ ಬಹುಪತ್ನಿತ್ವ ಪದ್ಧತಿಗೂ ಕಡಿವಾಣ ಬೀಳಲಿದೆ,” ಎಂದು ಸದನದಲ್ಲಿ ತಿಳಿಸಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!