ಮೊಬೈಲ್‌ನಲ್ಲಿ ಪಾಕಿಸ್ತಾನದ ದೂರವಾಣಿ ನಂಬರ್‌ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗಿರುವ ಚಿತ್ರಗಳು ಪತ್ತೆ

ದಾವಣಗೆರೆ – ಅಯೋಧ್ಯೆಯ ಶ್ರೀರಾಮಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತು ಭಯೋತ್ಪಾದನಾ ನಿಗ್ರಹ ದಳವು ೨೦ ವರ್ಷದ ಸುಹೇಲ್ ಎಂಬ ಭಯೋತ್ಪಾದಕನನ್ನು ಬಂಧಿಸಿವೆ. ಅವನು ಶ್ರೀರಾಮಮಂದಿರವನ್ನು ಗುರಿಯಾಗಿಸಲು ಸಂಚು ರೂಪಿಸಿದ್ದನ್ನು ಒಪ್ಪಿಕೊಂಡಿದ್ದಾನೆ. ಸುಹೇಲ್‌ನ ಮೊಬೈಲ್ ಫೋನ್‌ನಲ್ಲಿ ಪಾಕಿಸ್ತಾನಿ ದೂರವಾಣಿ ಸಂಖ್ಯೆಗಳು, ಅನುಮಾನಾಸ್ಪದ ವಾಟ್ಸಾಪ್ ಗ್ರೂಪ್‌ಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಇರುವ ಫೋಟೋಗಳು ಸಹ ಪತ್ತೆಯಾಗಿವೆ.
ಸುಹೇಲ್‌ನ ಬಂಧನದ ನಂತರ ಪೊಲೀಸರ ತಂಡಗಳು ಸಹರಾನ್‌ಪುರದಲ್ಲೂ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿವೆ. ಸಹರಾನ್‌ಪುರ ಪೊಲೀಸರು ಸುಹೇಲ್‌ನ ತಂದೆಯನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಸುಹೇಲ್ ದಾವಣಗೆರೆಯಲ್ಲಿ ವಾಸವಿದ್ದು ‘ಪೇಂಟರ್’ ಕೆಲಸ ಮಾಡುತ್ತಿದ್ದನು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!