ನಸರಾಪುರ ಕೊಲೆ ಪ್ರಕರಣ

ಪುಣೆ(ಮಹಾರಾಷ್ಟ್ರ) – ಭೋರ್ ತಾಲೂಕಿನ ನಸರಾಪುರದಲ್ಲಿ ಪುಟಾಣಿ ಮಗುವಿನ ಮೇಲೆ ಅತ್ಯಾಚಾರ ಎಸಗಿ, ಅವಳನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಜೂನ್ 25 ರಂದು ಪುಣೆ ಜಿಲ್ಲಾ ಸತ್ರ ನ್ಯಾಯಾಲಯವು 65 ವರ್ಷದ ಆರೋಪಿ ಭೀಮರಾವ್ ಕಾಂಬ್ಳೆಯನ್ನು ದೋಷಿ ಎಂದು ಘೋಷಿಸಿದೆ. ನ್ಯಾಯಾಲಯದಲ್ಲಿ ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳು ಪೂರ್ಣಗೊಂಡಿದ್ದು, ಸರಕಾರಿ ಸರಕಾರಿ ವಕೀಲರು ಈ ಕ್ರೂರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದಾರೆ. ಈ ಅಪರಾಧವು ಅತ್ಯಂತ ಅಪರೂಪದ ಹಾಗೂ ಅಮಾನವೀಯವಾದುದು ಎಂದು ನ್ಯಾಯಾಲಯವು ಒಪ್ಪಿಕೊಂಡಿದೆ. ಈ ಪ್ರಕರಣದ ಅಂತಿಮ ತೀರ್ಪನ್ನು ಜೂನ್ 29 ರಂದು ಪ್ರಕಟಿಸಲಾಗುವುದು. ಕೇವಲ ಒಂದೂಮುಕ್ಕಾಲು ತಿಂಗಳಲ್ಲಿ ತೀರ್ಪು ಹೊರಬರುತ್ತಿರುವುದರಿಂದ, ಇದು ರಾಜ್ಯದ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಇತ್ಯರ್ಥಗೊಂಡ ಪ್ರಕರಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಸರಕಾರಿ ನ್ಯಾಯವಾದಿಗಳು ಆರೋಪಿಯ ಕ್ರೌರ್ಯವನ್ನು ಎಳೆಎಳೆಯಾಗಿ ಬಿಚ್ಚಿಡುತ್ತಾ, ‘ಭೀಮರಾವ್ ಕಾಂಬ್ಳೆಗೆ ತಾನು ಮಾಡಿದ ಕೃತ್ಯದ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ಹಾಗಾಗಿ ಆತ ಯಾವುದೇ ದಯೆಗೆ ಅರ್ಹನಲ್ಲ. ತನ್ನನ್ನು ನಂಬಿದ ಮೂರೂವರೆ ವರ್ಷದ ಹೆಣ್ಣುಮಗುವಿನ ಮೇಲೆ ಆತ 39 ನಿಮಿಷಗಳ ಕಾಲ ಅತ್ಯಂತ ಜುಗುಪ್ಸಾಕರವಾಗಿ ದೌರ್ಜನ್ಯ ಎಸಗಿದ್ದಾನೆ. ಮಗುವಿನ ದೇಹದ ಮೇಲೆ 18 ಗಾಯಗಳಾಗಿರುವುದು ವೈದ್ಯಕೀಯ ತಪಾಸಣೆಯಿಂದ ತಿಳಿದುಬಂದಿದೆ. ಇಂತಹ ಕ್ರೂರಿಗೆ ಕಠಿಣ ಶಿಕ್ಷೆಯಾಗದಿದ್ದರೆ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತದೆ ಮತ್ತು ಸಾಮಾನ್ಯ ಜನರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲಿರುವ ವಿಶ್ವಾಸ ಇಲ್ಲದಂತಾಗುತ್ತದೆ. ಆದ್ದರಿಂದ ಆತನಿಗೆ ಗಲ್ಲು ಶಿಕ್ಷೆಯನ್ನು ಮಾತ್ರವೇ ನೀಡಬೇಕು.’’, ಎಂದು ಹೇಳಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !
ಆಷಾಢಿ ವಾರಿಯಲ್ಲಿ ಭಕ್ತರಿಗೆ ಯಾವುದೇ ಅನಾನುಕೂಲತೆಯಾಗದಂತೆ ಜಾಗ್ರತೆ ವಹಿಸಿ! – ದೇವೇಂದ್ರ ಫಡ್ನವಿಸ್, ಮುಖ್ಯಮಂತ್ರಿ, ಮಹಾರಾಷ್ಟ್ರ ರಾಜ್ಯ