ಮಾಜಿ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರ ಸಹೋದರನ ಅಂತ್ಯಕ್ರಿಯೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರರು!

ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಹಾಗೂ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯ ವೇಳೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಉಗ್ರರು ಉಪಸ್ಥಿತರಿದ್ದರು ಎಂಬುದನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಲಷ್ಕರ್-ಎ-ತೊಯ್ಬಾದ ಉಪಮುಖ್ಯಸ್ಥ ಸೈಫುಲ್ಲಾ ಕಸೂರಿ ಮತ್ತು ಪಾಕಿಸ್ತಾನ್ ಮರ್ಕಜಿ ಮುಸ್ಲಿಂ ಲೀಗ್ (PMML) ಪಕ್ಷಕ್ಕೆ ಸೇರಿದ ಕೆಲವು ನಾಯಕರು ಅಂತ್ಯಕ್ರಿಯೆಯಲ್ಲಿ ಉಪಸ್ಥಿತರಿದ್ದರೆಂದು ಹೇಳಲಾಗಿದೆ; ಆದರೆ ಈ ವೀಡಿಯೊಗೆ ಯಾವುದೇ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ಸೈಫುಲ್ಲಾ ಕಸೂರಿ ಏಪ್ರಿಲ್ 22, 2025 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂಚಿನಲ್ಲಿ ಭಾಗಿಯಾಗಿದ್ದನು. PMML ಪಕ್ಷವು ಲಷ್ಕರ್-ಎ-ತೊಯ್ಬಾಗೆ ಸಂಬಂಧಿಸಿದ ರಾಜಕೀಯ ವೇದಿಕೆಯಾಗಿದೆ ಎಂಬ ಆರೋಪಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ.

ಇಲ್ಲಿಯವರೆಗೆ ಶೋಯೆಬ್ ಅಖ್ತರ್ ಅಥವಾ ಅವರ ಕುಟುಂಬದಿಂದ ಈ ವಿವಾದದ ಬಗ್ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಇನ್ನೊಂದೆಡೆ, ಪಾಕಿಸ್ತಾನ ಸರಕಾರ ಕೂಡ ಈ ವೀಡಿಯೊಗೆ ಸಂಬಂಧಿಸಿದಂತೆ ಯಾವುದೇ ಹೇಳಿಕೆ ನೀಡಿಲ್ಲ.

ಸಂಪಾದಕೀಯ ನಿಲುವು

ಪಾಕಿಸ್ತಾನಿ ಕ್ರಿಕೆಟಿಗರು ಭಾರತದ ವಿರುದ್ಧ ಆಡುವಾಗ ಜಿಹಾದ್ ಮನಸ್ಥಿತಿಯಿಂದಲೇ ಆಡುತ್ತಾರೆ. ಹೀಗಿರುವಾಗ, ಅವರಿಗೆ ಭಯೋತ್ಪಾದಕರೊಂದಿಗೆ ಸಂಬಂಧವಿದ್ದರೆ ಅದರಲ್ಲಿ ಆಶ್ಚರ್ಯವೇನಿದೆ?