ತಾಲಿಬಾನ್‌ನಿಂದ ಪಾಕಿಸ್ತಾನದಲ್ಲಿರುವ ಇಸ್ಲಾಮಿಕ್ ಸ್ಟೇಟ್ ನೆಲೆಗಳ ಮೇಲೆ ಡ್ರೋನ್ ದಾಳಿ

ಕಾಬೂಲ್ (ಅಫ್ಘಾನಿಸ್ತಾನ) – ಅಫ್ಘಾನಿಸ್ತಾನದ ತಾಲಿಬಾನ್ ಸರಕಾರವು ದಲ್ಲಿರುವ ಇಸ್ಲಾಮಿಕ್ ಸ್ಟೇಟ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ನೆಲೆಗಳಿಂದ ಅಫ್ಘಾನಿಸ್ತಾನದ ನಾಗರಿಕರ ಮೇಲೆ ದಾಳಿ ಮಾಡಲು ಸಂಚು ರೂಪಿಸಲಾಗುತ್ತಿತ್ತು ಎಂದು ತಾಲಿಬಾನ್ ಹೇಳಿದೆ. ಎರಡು ದಿನಗಳ ಹಿಂದೆ ಪಾಕಿಸ್ತಾನ ನಡೆಸಿದ್ದ ವೈಮಾನಿಕ ದಾಳಿಗೆ ಪ್ರತಿಯಾಗಿ ತಾಲಿಬಾನ್ ಈ ಕ್ರಮ ಕೈಗೊಂಡಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ದಾಳಿಯಲ್ಲಿ ಹಲವು ಉಗ್ರರು ಹತರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದ್ದು, ಯಾವುದೇ ನಾಗರಿಕರಿಗೆ ಹಾನಿಯಾಗಿಲ್ಲ ಎಂದು ತಾಲಿಬಾನ್ ಸ್ಪಷ್ಟಪಡಿಸಿದೆ.

ಅಫ್ಘಾನಿಸ್ತಾನದ ಮೇಲಿನ ಪಾಕಿಸ್ತಾನದ ದಾಳಿಯನ್ನು ಭಾರತೀಯ ವಿದೇಶಾಂಗ ಸಚಿವಾಲಯವು ಖಂಡಿಸಿದೆ. ಮತ್ತೊಂದು ಸಾರ್ವಭೌಮ ದೇಶದ ಗಡಿಯೊಳಗೆ ನುಗ್ಗಿ ದಾಳಿ ಮಾಡುವುದು ಅಂತರರಾಷ್ಟ್ರೀಯ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಭಾರತ ಹೇಳಿದೆ.