
ಜೈಪುರ (ರಾಜಸ್ಥಾನ) – ರಾಜಸ್ಥಾನ ಪೊಲೀಸರ ಅಪರಾಧ ತನಿಖಾ ವಿಭಾಗವು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐ.ಎಸ್.ಐ.ಗಾಗಿ (ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್) ಕೆಲಸ ಮಾಡುತ್ತಿದ್ದ ರಫೀಕ್ ಚಂದ್ ಶೇಖ್ ಎಂಬ ಸಹಾಯಕನನ್ನು ಬಂಧಿಸಿದೆ. ರಫೀಕ್ ಕಳೆದ ೪ ವರ್ಷಗಳಿಂದ ಐ.ಎಸ್.ಐ.ನ ಸೂಚನೆಯ ಮೇರೆಗೆ ಭಾರತದಲ್ಲಿ ಗೂಢಚಾರಿಕೆ ನಡೆಸುವವರಿಗೆ ಹಣ ತಲುಪಿಸುವ ಕೆಲಸ ಮಾಡುತ್ತಿದ್ದ. ಪಾಕಿಸ್ತಾನದಿಂದ ಬರುವ ಹಣವನ್ನು ಯಾರಿಗೂ ಸಂಶಯ ಬಾರದಂತೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಕಳುಹಿಸಲಾಗುತ್ತಿತ್ತು. ಈ ವ್ಯವಸ್ಥೆಯ ಮೂಲಕ ಒಟ್ಟು ಎಷ್ಟು ಮೊತ್ತ ಭಾರತಕ್ಕೆ ಕಳುಹಿಸಲಾಗಿದೆ ಎಂಬುದನ್ನು ತನಿಖಾ ಸಂಸ್ಥೆಗಳು ಪತ್ತೆ ಹಚ್ಚುತ್ತಿವೆ.
ರಫೀಕ್ ಕೇವಲ ತನ್ನ ಹೆಸರಿನಲ್ಲಿ ಮಾತ್ರವಲ್ಲದೆ, ಇತರರ ಹೆಸರಿನಲ್ಲೂ ಕೂಡ ಹಲವು ಬ್ಯಾಂಕ್ ಖಾತೆಗಳನ್ನು ತೆರೆದಿದ್ದನು. ಪಾಕಿಸ್ತಾನದಿಂದ ಬರುವ ಹಣವನ್ನು ಮೊದಲು ಈ ಖಾತೆಗಳಿಗೆ ಕಳುಹಿಸಲಾಗುತ್ತಿತ್ತು. ಈ ಹಣವನ್ನು ಪಾಕಿಸ್ತಾನಕ್ಕಾಗಿ ಗೂಢಚಾರಿಕೆ ನಡೆಸಿದ ಅಥವಾ ಸೂಕ್ಷ್ಮ ಮಾಹಿತಿ ಕಲೆಹಾಕಿದ ಆರೋಪದ ಮೇಲೆ ತನಿಖೆ ಎದುರಿಸುತ್ತಿದ್ದವರಿಗೆ ತಲುಪಿಸಲಾಗುತ್ತಿತ್ತು.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border