ಪಾಕಿಸ್ತಾನದಲ್ಲಿ 125 ವರ್ಷಗಳ ಹಳೆಯ ಐತಿಹಾಸಿಕ ಗುರುದ್ವಾರವನ್ನು ಬುಲ್ಡೋಜರ್ ಬಳಸಿ ಧ್ವಂಸಗೊಳಿಸಿರುವುದಕ್ಕೆ ಭಾರತದ ತೀವ್ರ ವಿರೋಧ

ಫಾರೂಖಾಬಾದ್ (ಪಾಕಿಸ್ತಾನ) – ಇಲ್ಲಿನ 125 ವರ್ಷಗಳ ಹಳೆಯ ‘ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಸಾಹಿಬ್’ ಮೇಲೆ ಬುಲ್ಡೋಜರ್ ಚಲಾಯಿಸಿ ಧ್ವಂಸಗೊಳಿಸಿದ ಘಟನೆಯನ್ನು ಭಾರತ ಸರಕಾರ ತೀವ್ರವಾಗಿ ಖಂಡಿಸಿದೆ. “ಈ ಅಪರಾಧದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಮತ್ತು ಗುರುದ್ವಾರದ ಧ್ವಂಸಗೊಂಡ ಭಾಗವನ್ನು ಆದಷ್ಟು ಬೇಗ ಯಥಾಸ್ಥಿತಿಗೆ ತರಲು ಪುನರ್ನಿರ್ಮಿಸಿಕೊಡಬೇಕು. ಹಾಗೆಯೇ ಪಾಕಿಸ್ತಾನದಲ್ಲಿರುವ ಅಲ್ಪಸಂಖ್ಯಾತ ಸಮುದಾಯವನ್ನು ರಕ್ಷಿಸುವುದು ಅಲ್ಲಿನ ಸರಕಾರದ ಜವಾಬ್ದಾರಿಯಾಗಿದೆ,” ಎಂದು ಭಾರತ ಖಡಾಖಂಡಿತವಾಗಿ ಹೇಳಿದೆ.
ಇದು ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ವ್ಯವಸ್ಥಿತ ಅನ್ಯಾಯ! – ಭಾರತ
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, “125 ವರ್ಷಗಳ ಹಳೆಯ ಪವಿತ್ರ ಗುರುದ್ವಾರವನ್ನು ಧ್ವಂಸಗೊಳಿಸಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ. ಸಿಖ್ ಧರ್ಮೀಯರ ಧಾರ್ಮಿಕ ಶ್ರದ್ಧಾಕೇಂದ್ರದ ಮೇಲಿನ ಈ ದಾಳಿ ಅತ್ಯಂತ ಖಂಡನೀಯ. ಇಂತಹ ಘಟನೆಗಳು ಪಾಕಿಸ್ತಾನದಲ್ಲಿ ಹೊಸದೇನಲ್ಲ. ಅಲ್ಲಿ ಅಲ್ಪಸಂಖ್ಯಾತರು ಮತ್ತು ಅವರ ಪ್ರಾರ್ಥನಾ ಮಂದಿರಗಳನ್ನು ವ್ಯವಸ್ಥಿತವಾಗಿ ಗುರಿಪಡಿಸಲಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ,” ಎಂದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಮರಿಯಮ್ ನವಾಜ್ ಅವರಿಂದ ಹಸ್ತಕ್ಷೇಪ
ಲಾಹೋರ್‌ನಿಂದ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ಈ ಪ್ರದೇಶದಲ್ಲಿ ಗುರುದ್ವಾರವನ್ನು ಬುಲ್ಡೋಜರ್‌ನಿಂದ ಧ್ವಂಸಗೊಳಿಸುತ್ತಿರುವುದು ತಿಳಿಯುತ್ತಿದ್ದಂತೆ, ಸಿಖ್ ಸಮುದಾಯದವರು ಬೃಹತ್ ಮಟ್ಟದಲ್ಲಿ ಪ್ರತಿಭಟನೆಗಳನ್ನು ಪ್ರಾರಂಭಿಸಿದರು. ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಮರಿಯಮ್ ನವಾಜ್ ಅವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದರು. ಪಂಜಾಬ್ ಪ್ರಾಂತ್ಯದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ರಮೇಶ ಸಿಂಗ್ ಅರೋರಾ ಅವರು ತಕ್ಷಣವೇ ಫಾರೂಖಾಬಾದ್‌ನ ಗುರುದ್ವಾರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅವರು ಸ್ಥಳೀಯ ಸಿಖ್ ಬಾಂಧವರೊಂದಿಗೆ ಚರ್ಚಿಸಿ, ಗುರುದ್ವಾರವನ್ನು ತಕ್ಷಣವೇ ಪುನರ್ನಿರ್ಮಿಸುವ ಭರವಸೆ ನೀಡಿದ್ದಾರೆ.
ಸ್ಥಳೀಯ ಮುಸ್ಲಿಂ ವ್ಯಾಪಾರಿಗಳಿಂದ ಪುನರ್ನಿರ್ಮಾಣಕ್ಕೆ ವಿರೋಧ
ಈ ಗುರುದ್ವಾರದ ಪುನರ್ನಿರ್ಮಾಣಕ್ಕೆ ಸ್ಥಳೀಯ ಮುಸ್ಲಿಂ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ, ಈ ಗುರುದ್ವಾರವು ಕಳೆದ 80 ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿತ್ತು. ಈ ಅವಧಿಯಲ್ಲಿ ಅಲ್ಲಿ ಅನೇಕ ಕುಟುಂಬಗಳು ನೆಲೆಸಿದ್ದು, ಹಲವು ಅಂಗಡಿಗಳನ್ನು ಸ್ಥಾಪಿಸಲಾಗಿದೆ. ಈಗ ಅಲ್ಲಿ ಮತ್ತೆ ಗುರುದ್ವಾರವನ್ನು ನಿರ್ಮಿಸಿದರೆ, ಹಲವು ಕುಟುಂಬಗಳು ನಿರಾಶ್ರಿತರಾಗುತ್ತವೆ. ಆದ್ದರಿಂದ ಸರಕಾರವು ಮೊದಲು ಈ ಜನರ ಪುನರ್ವಸತಿಗೆ ವ್ಯವಸ್ಥೆ ಮಾಡಬೇಕು ಎಂದು ಸ್ಥಳೀಯ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border