ಬಾಂಗ್ಲಾದೇಶಿ ವಲಸಿಗರಿಗೆ ಆಶ್ರಯ ನೀಡುವವರು ಮತ್ತು ಸಹಾಯ ಮಾಡುವವರ ವಿರುದ್ಧವೂ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು !

ಮುರ್ಶಿದಾಬಾದ್(ಬಂಗಾಳ) – ಅಕ್ರಮ ವಲಸಿಗರ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಡಿಯಲ್ಲಿ ಭಗವಾನಗೋಲಾ ರೈಲ್ವೆ ನಿಲ್ದಾಣದ ಪ್ರದೇಶದಿಂದ ೯ ಬಾಂಗ್ಲಾದೇಶಿ ನಾಗರಿಕರನ್ನು ಬಂಧಿಸಲಾಗಿದೆ.
೧. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಬಂಧಿತರಾದ ವಲಸಿಗರು ಭಾರತದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ರಹಸ್ಯ ಮಾರ್ಗದ ಮೂಲಕ ಮತ್ತೆ ಬಾಂಗ್ಲಾದೇಶಕ್ಕೆ ಮರಳುವ ಸಿದ್ಧತೆಯಲ್ಲಿದ್ದರು.
೨. ಪೊಲೀಸರು ಎಲ್ಲಾ ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಎಲ್ಲರನ್ನೂ ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
೩.ಈ ಬಾಂಗ್ಲಾದೇಶಿ ನಾಗರಿಕರು ಭಾರತಕ್ಕೆ ಹೇಗೆ ಬಂದರು?, ಇಲ್ಲಿ ಎಷ್ಟು ಸಮಯದಿಂದ ವಾಸಿಸುತ್ತಿದ್ದರು? ಮತ್ತು ಅವರಿಗೆ ಯಾರು ಆಶ್ರಯ ನೀಡಿದ್ದರು?, ಈ ಎಲ್ಲಾ ವಿಷಯಗಳ ಬಗ್ಗೆ ತನಿಖಾ ಸಂಸ್ಥೆಗಳು ಶೋಧ ನಡೆಸುತ್ತಿವೆ.
೪. ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಇಡೀ ಪ್ರಕರಣದಲ್ಲಿ ಯಾವುದಾದರೂ ದೊಡ್ಡ ಅಕ್ರಮ ದಂಧೆ ನಡೆಸುವ ತಂಡ ಅಥವಾ ಮಾನವ ಕಳ್ಳಸಾಗಣೆ ಜಾಲ ಸಕ್ರಿಯವಾಗಿರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಇದೇ ನಿಟ್ಟಿನಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ನಂತರ ಅಗತ್ಯಕ್ಕೆ ಅನುಗುಣವಾಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!
ಕಲಬುರಗಿಯಲ್ಲಿ ಜೈಲಿನ ಗೋಡೆ ಜಿಗಿದು ೩ ಕೈದಿಗಳು ಪರಾರಿ!
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid