
ಕಲಬುರಗಿ – ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರ ಜಿಲ್ಲೆಯಾದ ಕಲಬುರಗಿಯಲ್ಲಿ, ಪೊಲೀಸ್ ಠಾಣೆಯಲ್ಲೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ‘ಪೋಕ್ಸೋ’ ಕಾಯ್ದೆಯಡಿ ಬಂಧಿತನಾಗಿದ್ದ ಆರೋಪಿಯೊಬ್ಬ ಪರಾರಿಯಾಗಿದ್ದಾನೆ.
ಜಿಲ್ಲೆಯ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಪರಾರಿಯಾದ ಆರೋಪಿಯ ಹೆಸರು ಮಂಜುನಾಥ (ವಯಸ್ಸು 24 ವರ್ಷ) ಆಗಿದೆ. ಒಂದು ವಾರದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಜುಲೈ 2ರ ನಸುಕಿನಲ್ಲಿ ಪೊಲೀಸರು ಮಲಗಿದ್ದನ್ನು ಕಂಡು, ಆರೋಪಿ ಮಂಜುನಾಥನು ಬಹಳ ಚಾಣಾಕ್ಷತನದಿಂದ ತನ್ನ ಕೈಯಲ್ಲಿದ್ದ ಕೈಕೋಳವನ್ನು ತೆಗೆದಿದ್ದಾನೆ. ನಂತರ ಯಾರಿಗೂ ತಿಳಿಯದಂತೆ ಪೊಲೀಸ್ ಠಾಣೆಯ ಆವರಣದಲ್ಲಿರುವ ಮರದ ಕೊಂಬೆಯ ಮೂಲಕ ಬೇಲಿ ದಾಟಿ ಪರಾರಿಯಾಗಿದ್ದಾನೆ. ಈ ದೃಶ್ಯವೆಲ್ಲವೂ ಪೊಲೀಸ್ ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ