ಗೃಹ ಸಚಿವಾಲಯದ ಕ್ರಮ

ನವ ದೆಹಲಿ – ಭಾರತದ ಗೃಹ ಸಚಿವಾಲಯವು ಪಾಕಿಸ್ತಾನದ ೨೩ ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಎಂದು ಘೋಷಿಸಿದೆ. ಈ ಕ್ರಮವನ್ನು ‘ಅನ್ ಲಾಫುಲ್ ಆಕ್ಟಿವಿಟೀಸ್ ಪ್ರಿವೆನ್ಷನ್ ಆಕ್ಟ್’ (ಯುಎಪಿಎ) ಅಂದರೆ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ’ಯಡಿ ತೆಗೆದುಕೊಳ್ಳಲಾಗಿದೆ. ಸರಕಾರಿ ಆದೇಶದ ಪ್ರಕಾರ, ಈ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೊಯ್ಬಾ ಮತ್ತು ಇತರ ಸಂಘಟನೆಗಳಿಗೆ ಸಂಬಂಧಿಸಿದವರಾಗಿದ್ದಾರೆ. ಈ ೨೩ ಜನರನ್ನು ಭಯೋತ್ಪಾದಕರ ಪಟ್ಟಿಗೆ ಸೇರಿಸಿರುವುದರಿಂದ, ಸಂಘಟನೆಯ ಒಟ್ಟು ಭಯೋತ್ಪಾದಕರ ಸಂಖ್ಯೆ ೮೦ಕ್ಕೆ ಏರಿದೆ.
೧. ಈ ೨೩ ಭಯೋತ್ಪಾದಕರ ಮೇಲೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗಾಗಿ ಜನರನ್ನು ನೇಮಕ ಮಾಡಿಕೊಳ್ಳುವುದು, ಅಕ್ರಮ ವಲಸೆ, ತರಬೇತಿ, ಡ್ರೋನ್ ಮೂಲಕ ಶಸ್ತ್ರಾಸ್ತ್ರಗಳನ್ನು ತಲುಪಿಸುವುದು ಮತ್ತು ದಾಳಿ ನಡೆಸಲು ಪಿತೂರಿ ನಡೆಸುವುದು ಮುಂತಾದ ಆರೋಪಗಳಿವೆ.
೨. ಈ ೨೩ ಭಯೋತ್ಪಾದಕರಲ್ಲಿ ಅಬ್ದುಲ್ ರೌಫ್, ಹಫೀಜ್ ಖಾಲಿದ್ ವಲಿದ್ ಮತ್ತು ರಾಣಾ ಇಫ್ತಿಕಾರ್ ಇವರನ್ನು ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಹಫೀಜ್ ಸಯೀದ್ ನ ಆಪ್ತ ಸಹಚರರು ಎಂದು ಹೇಳಲಾಗುತ್ತಿದೆ. ಮೂವರು ವ್ಯಕ್ತಿಗಳು ೨೦೧೬ ರಲ್ಲಿ ನಗ್ರೋಟಾದಲ್ಲಿನ ಭಾರತೀಯ ಸೇನೆಯ ಶಿಬಿರದ ಮೇಲೆ ನಡೆಸಲಾದ ಭಯೋತ್ಪಾದಕ ದಾಳಿಯಲ್ಲಿ, ಹಾಗೂ ಇಬ್ಬರು ೨೦೧೮ ರಲ್ಲಿ ಸುಂಜವಾನ್ ನಲ್ಲಿನ ಸೇನಾ ನೆಲೆಯ ಮೇಲಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದರು.
೩. ಭಯೋತ್ಪಾದಕರ ಪಟ್ಟಿಯಲ್ಲಿ ಈ ವ್ಯಕ್ತಿಗಳನ್ನು ಸೇರಿಸಿರುವುದರಿಂದ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಅವರ ನಿಧಿಯನ್ನು ತಡೆಯಲು, ಶಸ್ತ್ರಾಸ್ತ್ರ ಮಾರಾಟದ ಮೇಲೆ ನಿಷೇಧ ಹೇರಲು ಮತ್ತು ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮುಂತಾದ ಅಧಿಕಾರ ಸಿಗಲಿವೆ.
೪. ೨೦೧೯ ರಲ್ಲಿ ಭಯೋತ್ಪಾದಕ ವಿರೋಧಿ ಕಾಯ್ದೆಯ ತಿದ್ದುಪಡಿಯ ಮೂಲಕ ವೈಯಕ್ತಿಕ ಭಯೋತ್ಪಾದಕರ ಪಟ್ಟಿಯನ್ನು ಸಿದ್ಧಪಡಿಸುವ ನಿಬಂಧನೆಯನ್ನು ಮಾಡಲಾಗಿತ್ತು. ಈ ಕಾಯ್ದೆಯಲ್ಲಿ ಮೊದಲು ಕೇವಲ ‘ಭಯೋತ್ಪಾದಕ ಸಂಘಟನೆ’ ಎಂದು ಮಾತ್ರ ಪಟ್ಟಿ ಮಾಡಬಹುದಾಗಿತ್ತು.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim