
ಸಿಡ್ನಿ (ಆಸ್ಟ್ರೇಲಿಯಾ) – ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ೯ ಜುಲೈ ರಂದು ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ಕೆಲವು ದಿನಗಳ ಮೊದಲೇ ಅಬು ಮುಸ್ತಫಾ ಹೆಸರಿನ ಫೇಸ್‌ಬುಕ್ ಖಾತೆಯಿಂದ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆಯ ಕುರಿತು ‘ಆಸ್ಟ್ರೇಲಿಯನ್ ಫೆಡರಲ್ ಪೊಲೀಸ್’ ತನಿಖೆ ನಡೆಸುತ್ತಿದೆ.
೧. ‘ದಿ ಆಸ್ಟ್ರೇಲಿಯಾ ಟುಡೇ’ ವರದಿಯ ಪ್ರಕಾರ, ಪ್ರಧಾನಿ ಮೋದಿ ಅವರು ೯ ಜುಲೈ ರಂದು ಮೆಲ್ಬೋರ್ನ್‌ನ ‘ಮಾರ್ವೆಲ್ ಸ್ಟೇಡಿಯಂ’ನಲ್ಲಿ ನಡೆಯಲಿರುವ ‘ಮೆಲ್ಬೋರ್ನ್ ಮೀಟ್ಸ್ ಮೋದಿ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಮುದಾಯ ಕಾರ್ಯಕ್ರಮದ ಮಾಹಿತಿ ನೀಡಿದ್ದ ಫೇಸ್‌ಬುಕ್ ಖಾತೆಯ ಪೋಸ್ಟ್‌ನ ಕೆಳಗೆ ಪ್ರತಿಕ್ರಿಯೆ ಬರೆದು ಈ ಬೆದರಿಕೆ ಹಾಕಲಾಗಿತ್ತು.
೨. ಅಬು ಮುಸ್ತಫಾ ತನ್ನ ಪ್ರತಿಕ್ರಿಯೆಯಲ್ಲಿ, ‘ಕಾರ್ಯಕ್ರಮದ ಸಮಯದಲ್ಲಿ ಸ್ಟೇಡಿಯಂನ ಮೇಲ್ಛಾವಣಿಯನ್ನು ಮುಚ್ಚಿಡುವುದು ಉತ್ತಮ, ಇಲ್ಲದಿದ್ದರೆ ಮೋದಿ ಅವರು ತಮ್ಮ ಸಾವಿಗಾಗಿಯೇ ಆಸ್ಟ್ರೇಲಿಯಾಕ್ಕೆ ಬರುತ್ತಿದ್ದಾರೆ’ ಎಂದು ಬರೆದಿದ್ದಾನೆ.
೩. ಆಸ್ಟ್ರೇಲಿಯಾದ ಮಾಧ್ಯಮ ವರದಿಗಳ ಪ್ರಕಾರ, ಯಾವುದೇ ದೇಶದ ಮುಖ್ಯಸ್ಥರಿಗೆ ನೀಡಲಾಗುವ ಬೆದರಿಕೆಗಳನ್ನು ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಸಂಸ್ಥೆಗಳು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತವೆ. ಗಣ್ಯ ವ್ಯಕ್ತಿಗಳ ಅಂತರರಾಷ್ಟ್ರೀಯ ಪ್ರವಾಸಗಳ ಭದ್ರತಾ ವ್ಯವಸ್ಥೆಯಲ್ಲಿ ‘ಆಸ್ಟ್ರೇಲಿಯನ್ ಫೆಡರಲ್ ಪೊಲೀಸ್’, ರಾಜ್ಯ ಪೊಲೀಸ್ ಮತ್ತು ವಿಶೇಷ ರಕ್ಷಣಾ ಭದ್ರತಾ ಪಡೆ ಸೇರಿದಂತೆ ಹಲವು ಸಂಸ್ಥೆಗಳು ಭಾಗಿಯಾಗಿರುತ್ತವೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಭಾರತ-ಪಾಕ್ ಗಡಿಯಲ್ಲಿರುವ ಅಕ್ರಮ ಮಸೀದಿಗಳು ಮತ್ತು ದರ್ಗಾಗಳನ್ನು ಧ್ವಂಸಗೊಳಿಸುವ ವಿರುದ್ಧದ ಅರ್ಜಿಗಳನ್ನು ರಾಜಸ್ಥಾನ ಹೈಕೋರ್ಟ್ ವಜಾ : Illigal Masjids around Indo-Pak border