ಶ್ರೀರಾಮ ಮಂದಿರ ಕಳ್ಳತನ ಪ್ರಕರಣ; ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಹೇಳಿಕೆ

ಅಯೋಧ್ಯಾ (ಉತ್ತರ ಪ್ರದೇಶ) – ಶ್ರೀರಾಮ ಮಂದಿರದಲ್ಲಿ ನಡೆದಿರುವ ಕಳ್ಳತನದಿಂದ ನನಗೆ ಅತ್ಯಂತ ದುಃಖವಾಗಿದೆ. ಯಾರೇ ಪಾಪ ಮಾಡಿದ್ದರೂ, ಅವರಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಇದು ಕೋಟ್ಯಂತರ ಹಿಂದೂಗಳ ಶ್ರದ್ಧೆಯ ಪ್ರಶ್ನೆಯಾಗಿದೆ ಮತ್ತು ಈ ಘಟನೆಯನ್ನು ಬಳಸಿಕೊಂಡು ಯಾವುದೇ ವ್ಯಕ್ತಿ ತನ್ನ ವೈಯಕ್ತಿಕ ಲಾಭಕ್ಕಾಗಿ ರಾಜಕೀಯ ಮಾಡಬಾರದೆಂದು ಎಲ್ಲರಲ್ಲಿ ವಿನಂತಿಸುತ್ತೇನೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ. ಅವರು ಈ ಪಾಪದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ವ್ಯಕ್ತಿಗೂ ಖಂಡಿತವಾಗಿಯೂ ಶಿಕ್ಷೆ ಕೊಡಿಸುತ್ತಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸದ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರು ಪತ್ರವೊಂದರ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಮಹಂತ್ ನೃತ್ಯ ಗೋಪಾಲ್ ದಾಸ್ ಮಹಾರಾಜರು ಶ್ರೀರಾಮ ಮಂದಿರ ಚಳವಳಿಯ ಪ್ರಮುಖ ಸಂತರಲ್ಲಿ ಒಬ್ಬರಾಗಿದ್ದಾರೆ. ಅವರು ಅಯೋಧ್ಯೆಯ ಪ್ರಸಿದ್ಧ ‘ಮಣಿರಾಮ್ ಛಾವಣಿ’ಯ ಮುಖ್ಯಸ್ಥರೂ ಆಗಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ