
ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ ಎಂದು ಭಾಜಪ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಅವರು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಇತ್ತೀಚೆಗೆ ಕೊಲೆಯಾದ ಶಿವಾಜಿ ರಾವ್ ಬಾಯರೊಜಿ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತದನಂತರ ಪತ್ರಕರ್ತರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಕಳೆದ ವಾರ ನರೇಗಲ್ ನಲ್ಲಿ ಎತ್ತಿನ ಗಾಲಿಯ ಸ್ಪರ್ಧೆಯ ವೇಳೆ ಪಟಾಕಿ ಸಿಡಿಸಿದ ಕಾರಣಕ್ಕೆ ಲೋಹಿತ ಕುರುಬರ ಮತ್ತು ಅವರ ಸಹಚರರ ಮೇಲೆ ದಾಳಿ ಮಾಡಲಾಗಿತ್ತು. ಕಳೆದ ೬೦ ವರ್ಷಗಳಿಂದ ಅಂಗಡಿ ನಡೆಸುತ್ತಿದ್ದ ಶಿವಾಜಿ ರಾವ್ ಅವರಿಗೆ ೧೦೦ ರೂಪಾಯಿ ಕೊಟ್ಟು ೫೦೦ ರೂಪಾಯಿ ನೀಡಿದ್ದೇವೆ ಎಂದು ಸುಳ್ಳು ಹೇಳಿ, ಜಗಳ ತೆಗೆದು ಅವರ ಕೊಲೆ ಮಾಡಲಾಗಿತ್ತು. ಇದು ಕೇವಲ ವೈಯಕ್ತಿಕ ಘಟನೆಯಲ್ಲ. ಈ ಕೊಲೆಯ ಹಿಂದೆ ಒಂದು ವ್ಯವಸ್ಥಿತ ಪಿತೂರಿ ಅಡಗಿದೆ, ಎಂದು ಆರೋಪಿಸಿದರು.
ಯಲ್ಲಾಪುರದಲ್ಲಿ ‘ಲವ್ ಜಿಹಾದ್’ ಕಾರಣದಿಂದಾಗಿ ಹಿಂದೂ ಮಹಿಳೆಯೊಬ್ಬಳ ಕ್ರೂರ ಕೊಲೆಯಾಗಿತ್ತು. ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆ ನೀತಿಯಿಂದಾಗಿ ಮತಾಂಧ ಶಕ್ತಿಗಳಿಗೆ ಬಲ ಬಂದಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧೈರ್ಯವಿದ್ದರೆ, ಇಂತಹ ಘಟನೆಗಳಿಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಿ ಎಂದು ವಿಜಯೇಂದ್ರ ಸವಾಲು ಹಾಕಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !