ನೈತಿಕ ಶಿಕ್ಷಣಕ್ಕೆ ಯಾವುದೇ ನಿಷೇಧವಿಲ್ಲ!

ರಾಯ್‌ಪುರ (ಛತ್ತೀಸ್‌ಗಢ) – ಶಾಲೆಗಳಲ್ಲಿ ಸರಸ್ವತಿ ವಂದನೆ, ಗಾಯತ್ರಿ ಮಂತ್ರ, ಗುರುಮಂತ್ರ ಮತ್ತು ಇತರ ಹಿಂದೂ ಪ್ರಾರ್ಥನೆಗಳನ್ನು ಪಠಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಛತ್ತೀಸ್‌ಗಢ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ. ನ್ಯಾಯಮೂರ್ತಿ ಅಮಿತೇಂದ್ರ ಕಿಶೋರ್ ಪ್ರಸಾದ್ ಅವರು ಈ ಅರ್ಜಿಯು ಅವಧಿಗೆ ಮುನ್ನ ಸಲ್ಲಿಕೆಯಾಗಿದೆ ಎಂದು ಹೇಳಿ ವಜಾಗೊಳಿಸಿದರು. ಅರ್ಜಿದಾರರು ಮೂಲಭೂತ ಹಕ್ಕುಗಳ ಯಾವುದೇ ವಾಸ್ತವಿಕ ಉಲ್ಲಂಘನೆ ಅಥವಾ ವಿದ್ಯಾರ್ಥಿಗಳನ್ನು ಈ ಪ್ರಾರ್ಥನೆಗಳಲ್ಲಿ ಭಾಗವಹಿಸುವಂತೆ ಬಲವಂತಪಡಿಸಿದ ಯಾವುದೇ ಉದಾಹರಣೆಯನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸಲು ಸಾಧ್ಯವಾಗಲಿಲ್ಲ ಎಂದು ನ್ಯಾಯಾಲಯ ಹೇಳಿದೆ. ಛತ್ತೀಸ್‌ಗಢ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಅಬ್ದುಲ್ ಸಲಾಮ್ ರಿಜ್ವಿ, ಅಲ್ಪಸಂಖ್ಯಾತರ ವಿಭಾಗದ ಮಾಜಿ ಅಧ್ಯಕ್ಷ ಮಹೇಂದ್ರ ಛಾಬ್ರಾ ಮತ್ತು ಬಿಲಾಸ್‌ಪುರದ ಸಾಮಾಜಿಕ ಕಾರ್ಯಕರ್ತ ಶಫೀಕ್ ಅಹ್ಮದ್ ಅವರು ಶಾಲಾ ಶಿಕ್ಷಣ ಇಲಾಖೆಯ ಈ ಸುತ್ತೋಲೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.
೧. ಶಿಕ್ಷಣ ಇಲಾಖೆಯ ಆದೇಶದಲ್ಲಿ ವಿದ್ಯಾರ್ಥಿಗಳ ಸಾಂವಿಧಾನಿಕವಾಗಿ ಸಂರಕ್ಷಿಸಲ್ಪಟ್ಟ ಧಾರ್ಮಿಕ ಸ್ವಾತಂತ್ರ್ಯ ಅಥವಾ ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವಂತಹ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸಲು ಅವರನ್ನು ಬಲವಂತಪಡಿಸಿರುವುದು ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.
೨. ನ್ಯಾಯಾಲಯವು, ಈ ಸುತ್ತೋಲೆಯು ಸಂವಿಧಾನದ ವಿಧಿ ೨೮(೧) ಅನ್ನು ಉಲ್ಲಂಘಿಸುವುದಿಲ್ಲ ಎಂದು ಹೇಳಿದೆ. ಈ ವಿಧಿಯ ಪ್ರಕಾರ, ಸಂಪೂರ್ಣವಾಗಿ ಸರಕಾರಿ ಅನುದಾನದಿಂದ ನಡೆಯುವ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಶಿಕ್ಷಣವನ್ನು ನಿಷೇಧಿಸಲಾಗಿದೆ. ಆದರೆ, ಈ ನಿಬಂಧನೆಯು ನೈತಿಕ ಶಿಕ್ಷಣವನ್ನು ನಿಷೇಧಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
೩. ಸಂವಿಧಾನದ ವಿಧಿ ೨೮(೧) ರ ಪ್ರಕಾರ, ಯಾವುದೇ ಸಾಂಪ್ರದಾಯಿಕ ಸಿದ್ಧಾಂತಗಳಿಂದ ಮುಕ್ತವಾಗಿರುವ ನೈತಿಕ ಶಿಕ್ಷಣವನ್ನು ಈ ನಿಬಂಧನೆಯು ನಿಷೇಧಿಸುವುದಿಲ್ಲ. ಇದು ಉತ್ತಮ ನಾಗರಿಕರನ್ನು ರೂಪಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾಮಾಜಿಕ ಸಾಮರಸ್ಯವನ್ನು ಹೆಚ್ಚಿಸಲು ಅತ್ಯಗತ್ಯವಾದ ಭಾಗವಾಗಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ