ರಾಜ್ಯದಲ್ಲಿ ಕ್ರೂರಕರ್ಮಿ ಟಿಪ್ಪು ಸುಲ್ತಾನನ ಆಚರಣೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ಒಂದು ಶಬ್ದವನ್ನೂ ಆಡದ 'ಭೀಮ ಆರ್ಮಿ' ಸಂಘಟನೆಯ ಬೇಡಿಕೆ

ಬೆಳಗಾವಿ – ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಜುಲೈ ೧೦, ೧೧ ಮತ್ತು ೧೨ ರಂದು ಬೆಳಗಾವಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಸಂಚಲನ, ಹಾಗೆಯೇ ವಿವಿಧ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು ಎಂದು ‘ಭೀಮ ಆರ್ಮಿ’ ಸಂಘಟನೆಯು ಜಿಲ್ಲಾ ಆಡಳಿತ ಮತ್ತು ರಾಜ್ಯ ಸರ್ಕಾರದ ಬಳಿ ಬೇಡಿಕೆ ಇಟ್ಟಿದೆ. ‘ಭೀಮ ಆರ್ಮಿ’ಯ ಬೆಳಗಾವಿ ಜಿಲ್ಲಾ ಶಾಖೆಯು ತನ್ನ ಮನವಿಯಲ್ಲಿ, ರಾಜ್ಯದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ, ಹಾಗೆಯೇ ಸಾಮಾಜಿಕ ಸಾಮರಸ್ಯವನ್ನು ಕಾಯ್ದುಕೊಳ್ಳುವುದು ಸರ್ಕಾರದ ಮುಖ್ಯ ಜವಾಬ್ದಾರಿಯಾಗಿದೆ ಎಂದು ಹೇಳಿದೆ. ಸಂಘದ ಕಾರ್ಯಕ್ರಮಗಳ ಬಗ್ಗೆ ಆಳವಾದ ಪರಿಶೀಲನೆ ನಡೆಸಬೇಕು ಮತ್ತು ಕಾನೂನು-ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದ್ದರೆ ಅದರ ಮೇಲೆ ಅಗತ್ಯ ನಿರ್ಬಂಧಗಳನ್ನು ವಿಧಿಸಬೇಕು ಎಂದು ಈ ಸಂಘಟನೆಯು ಒತ್ತಾಯಿಸಿದೆ. (ರಾಷ್ಟ್ರಪ್ರೇಮ, ಸಮಾಜಸಹಾಯ ಇತ್ಯಾದಿ ಉದ್ದೇಶಗಳನ್ನು ಮುಂದಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಸಂಘದ ಸಂಚಲನದಲ್ಲಿ ಎಂದಾದರೂ ಕಾನೂನು-ಸುವ್ಯವಸ್ಥೆಯ ಸಮಸ್ಯೆ ಉಂಟಾಗಿರುವುದು ಕೇಳಿಬಂದಿಲ್ಲ! – ಸಂಪಾದಕರು)
ಈ ಮನವಿಯಲ್ಲಿ,
೧. ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸೇವಾ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು.
೨. ಕಾರ್ಯಕ್ರಮದ ಸಮಯದಲ್ಲಿ ಯಾವುದೇ ರೀತಿಯ ದ್ವೇಷಪೂರಿತ ಭಾಷಣ, ಪ್ರಚೋದನಕಾರಿ ಹೇಳಿಕೆಗಳು ಅಥವಾ ಅಕ್ರಮ ಕೃತ್ಯಗಳು ನಡೆದರೆ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ