ಬಂಟ್ವಾಳದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಮುಸ್ಲಿಮನಿಗೆ 20 ವರ್ಷಗಳ ಜೈಲು ಶಿಕ್ಷೆ

ಆಫ್ರಿದ್ ಉಪಾಖ್ಯಾ ಅಪ್ಪಿಗೆ 20 ವರ್ಷಗಳ ಜೈಲು ಶಿಕ್ಷೆ

ಮಂಗಳೂರು – ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಗುರುಪುರ ಸಮೀಪದ ಅಡ್ಡೂರು ಕೆಳಗಿನಕೆರೆ ನಿವಾಸಿ ಅಫ್ರೀದ್ ಅಲಿಯಾಸ್ ಅಪ್ಪಿ (ವಯಸ್ಸು 20 ವರ್ಷ) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 55 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿಯು ದಂಡ ಪಾವತಿಸಲು ವಿಫಲವಾದರೆ 4 ತಿಂಗಳ ಸಾಮಾನ್ಯ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. ದಂಡದ 55 ಸಾವಿರ ರೂಪಾಯಿ ಮೊತ್ತವನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಬೇಕು, ಜೊತೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 5 ಲಕ್ಷ 45 ಸಾವಿರ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶನ ನೀಡಲಾಗಿದೆ.

ಬಂಟ್ವಾಳ ತಾಲೂಕಿನ ಬಾಡಿಗೆ ಮನೆಯಲ್ಲಿ ವಾಸವಿದ್ದ 17 ವರ್ಷದ ಬಾಲಕಿಯೊಬ್ಬಳಿಗೆ ವಾಹನ ಚಾಲಕ ಅಫ್ರೀದ್‌ನೊಂದಿಗೆ ಪರಿಚಯವಾಗಿತ್ತು. ನಂತರ ಅವನು ಆಕೆಯೊಂದಿಗೆ ಮಾತನಾಡಿ ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ಆಮಿಷ ಒಡ್ಡಲಾರಂಭಿಸಿದನು. 27 ಮೇ 2024 ರಂದು ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಆತ ಆಕೆಯ ಮೇಲೆ ದೌರ್ಜನ್ಯ ಎಸಗಿದನು. ಅಲ್ಲದೆ, ಈ ಕೃತ್ಯದ ವಿಡಿಯೋ ಮಾಡಿದ್ದೇನೆ ಎಂದು ಹೇಳಿ, ದೈಹಿಕ ಸಂಬಂಧಕ್ಕೆ ನಿರಾಕರಿಸಿದರೆ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದನು. ನಂತರ ಅವನು ಹಲವು ಬಾರಿ ದೌರ್ಜನ್ಯ ಎಸಗಿದನು ಮತ್ತು ಮದುವೆಯಾಗಲು ನಿರಾಕರಿಸಿ ವಂಚಿಸಿದನು. ಇದರಿಂದ ಮಾನಸಿಕ ಆಘಾತಕ್ಕೊಳಗಾದ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು.

ಸಂಪಾದಕೀಯ ನಿಲುವು

ಇಂತಹವರನ್ನು ಈಗ 20 ವರ್ಷಗಳ ಕಾಲ ಸಾಕಬೇಕಾಗುತ್ತದೆ! ಅತ್ಯಾಚಾರ ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಯಾಗುವವರೆಗೆ ಇಂತಹ ಅಪರಾಧಗಳು ನಿಲ್ಲುವುದಿಲ್ಲ, ಇದನ್ನು ಸರಕಾರ ಗಮನದಲ್ಲಿಟ್ಟುಕೊಂಡು ಅಂತಹ ಕಾನೂನನ್ನು ರೂಪಿಸುವುದು ಅಗತ್ಯವಿದೆ!