ಹುಂಡಿ ಹಣದ ಎಣಿಕೆಯ ಚಿತ್ರೀಕರಣಕ್ಕಾಗಿ (ವಿಡಿಯೋ ಶೂಟಿಂಗ್) ಬಂದಿದ್ದ ಆರೋಪಿ!

ಹಾಸನ – ಬೇಲೂರು ನಗರದ ಐತಿಹಾಸಿಕ ಚನ್ನಕೇಶವ ಸ್ವಾಮಿ ದೇವಸ್ಥಾನದ ಹುಂಡಿಯಿಂದ ೧ ಲಕ್ಷದ ೯೮ ಸಾವಿರ ರೂಪಾಯಿಗಳನ್ನು, ಹುಂಡಿ ಹಣದ ಎಣಿಕೆಯ ಚಿತ್ರೀಕರಣಕ್ಕಾಗಿ ಬಂದಿದ್ದ ವ್ಯಕ್ತಿಯೊಬ್ಬ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ‘ಕರ್ನಾಟಕ ಒನ್’ ಕೇಂದ್ರದ ಮಾಲೀಕ ನೀಲಕಂಠ ಎಂಬಾತ ಹುಂಡಿ ಎಣಿಕೆಯ ಚಿತ್ರೀಕರಣಕ್ಕಾಗಿ ಬಂದಿದ್ದನು. ಆತನ ನಡವಳಿಕೆಯ ಬಗ್ಗೆ ಅನುಮಾನ ಬಂದು ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಈ ವಿಷಯ ಬಯಲಾಗಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅವರು ಬೇಲೂರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ನೀಲಕಂಠನನ್ನು ಬಂಧಿಸಲಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ