
ಬಾಂದಾ (ಉತ್ತರ ಪ್ರದೇಶ) – 7 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ‘ಪೋಕ್ಸೋ’ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಇದರೊಂದಿಗೆ 20,೦೦೦ ರೂಪಾಯಿ ದಂಡವನ್ನೂ ಕೂಡ ಹೇರಿದೆ. ದಂಡದ ಸಂಪೂರ್ಣ ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
1. ಈ ಘಟನೆಯು 10 ಮೇ 2023 ರಂದು ನಡೆದಿತ್ತು. ಕಮಾಸಿನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ 7 ವರ್ಷದ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಆಗ 40 ವರ್ಷದ ಆರೋಪಿ ತೀರಥ್ ಆಕೆಯನ್ನು ಅಪಹರಿಸಿದನು. ಬಾಲಕಿಯನ್ನು ನಿರ್ಜನ ಅರಣ್ಯಕ್ಕೆ ಕರೆದೊಯ್ದು ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಮಾಡಿದನು. ಬಾಲಕಿ ವಿರೋಧಿಸಿದಾಗ, ಆರೋಪಿಯು ಆಕೆಯನ್ನು ಅಮಾನವೀಯವಾಗಿ ಥಳಿಸಿದನು. ಘಟನೆಯ ನಂತರ, ಬಾಲಕಿಯ ಕೊಲೆ ಮಾಡಲು ಪ್ರಯತ್ನಿಸಿದ ಆರೋಪಿ ಆಕೆಯ ಕುತ್ತಿಗೆಗೆ ನೇಣು ಹಾಕಲು ಸಹ ಪ್ರಯತ್ನಿಸಿದ್ದನು.
2. ಸಂತ್ರಸ್ತ ಬಾಲಕಿಯ ತಂದೆಯ ದೂರಿನ ಮೇರೆಗೆ, 13 ಮೇ 2023 ರಂದು ಕಮಾಸಿನ್ ಪೊಲೀಸ್ ಠಾಣೆಯಲ್ಲಿ ಅಪಹರಣ, ಅತ್ಯಾಚಾರ, ‘ಪೋಕ್ಸೋ’ ಕಾಯಿದೆ ಮತ್ತು ಇತರ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
3. ‘ಪೋಕ್ಸೋ’ ನ್ಯಾಯಾಲಯದ ನ್ಯಾಯಾಧೀಶ ಪ್ರದೀಪ್ ಕುಮಾರ್ ಮಿಶ್ರಾ ಅವರು ಲಭ್ಯವಿರುವ ಸಾಕ್ಷ್ಯಗಳು, ವೈದ್ಯಕೀಯ ವರದಿ, ಸಾಕ್ಷಿಗಳ ಹೇಳಿಕೆಗಳು ಮತ್ತು ಸಂತ್ರಸ್ತೆಯ ಸಾಕ್ಷ್ಯದ ಆಧಾರದ ಮೇಲೆ 21 ಪುಟಗಳ ತೀರ್ಪಿನಲ್ಲಿ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಲಾಯಿತು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ