2006 ಮುಂಬೈ ರೈಲು ಸರಣಿ ಬಾಂಬ್ ಸ್ಫೋಟ ಪ್ರಕರಣ

ನವ ದೆಹಲಿ – ಮುಂಬೈ ಉಪನಗರ ರೈಲುಗಳಲ್ಲಿ (ಲೋಕಲ್ ರೈಲುಗಳಲ್ಲಿ) 2006 ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳ ಪ್ರಕರಣದಲ್ಲಿ ಭಯೋತ್ಪಾದನಾ ವಿರೋಧಿ ದಳ 28 ಮುಸ್ಲಿಮರು ಆರೋಪಿಗಳೆಂದು ಹೇಳಿತ್ತು. 13 ಜನರನ್ನು ಬಂಧಿಸಿದ ನಂತರ, ಕಳೆದ ವರ್ಷ ಜುಲೈನಲ್ಲಿ ಮುಂಬೈ ಉಚ್ಚ ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು. ಈ ನಿರ್ಧಾರವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು; ಆದರೆ ಸುಪ್ರೀಂ ಕೋರ್ಟ್ ಕೂಡ ಆರೋಪಿಗಳ ದೋಷರಹಿತತೆ ಮತ್ತು ಅವರ ಬಿಡುಗಡೆಯ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಸ್ಪಷ್ಟವಾಗಿ ನಿರಾಕರಿಸಿತು.
2006 Mumbai Serial Train Bomb Blasts case: Supreme Court refuses to interfere with the Bombay High Court's acquittal of all the accused
If all the accused are innocent, then who carried out these bomb blasts?
Who will answer this question, and when?#MumbaiTrainBlasts… pic.twitter.com/g8S9gXdIpS
— Sanatan Prabhat (@SanatanPrabhat) July 11, 2026
ಸೆಪ್ಟೆಂಬರ್ 2015 ರಲ್ಲಿ ವಿಶೇಷ ಮಕೋಕಾ (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ನ್ಯಾಯಾಲಯವು ಈ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಆಗ ನ್ಯಾಯಾಲಯವು 5 ಆರೋಪಿಗಳಿಗೆ ಮರಣದಂಡನೆ ಮತ್ತು 7 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು, ಒಬ್ಬರನ್ನು ದೋಷಮುಕ್ತಗೊಳಿಸಿತ್ತು. ಇದರ ನಂತರ ಮಹಾರಾಷ್ಟ್ರ ಸರ್ಕಾರ ಮರಣದಂಡನೆ ಅನುಮೋದಿಸಲು ಮುಂಬೈ ಉಚ್ಚ ನ್ಯಾಯಾಲಯದ ಮೊರೆ ಹೋಗಿತ್ತು. ಮತ್ತೊಂದೆಡೆ ದೋಷಿಗಳು ಈ ಶಿಕ್ಷೆಯ ವಿರುದ್ಧ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಬಳಿಕ ಜುಲೈ 2025 ರಲ್ಲಿ ನ್ಯಾಯಾಲಯವು ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !