
ನವ ದೆಹಲಿ – ತಮಿಳುನಾಡಿನಲ್ಲಿ ಬಕ್ರೀದ್ ಸೇರಿದಂತೆ ಯಾವುದೇ ದಿನ ರಾಜ್ಯಾದ್ಯಂತ ಹಸು ಮತ್ತು ಕರುಗಳ ಹತ್ಯೆಯ ಮೇಲೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ಆದೇಶದ ಅಂತಿಮ ಭಾಗದಲ್ಲಿ ತಿದ್ದುಪಡಿಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ನ್ಯಾಯಾಲಯವು ತಮಿಳುನಾಡು ಸರಕಾರದ ವಿಶೇಷ ರಜಾ ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶವು ರಾಜ್ಯದಲ್ಲಿ ಜಾರಿಯಲ್ಲಿರುವ ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯಿದೆ, 1958ರ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಸರಕಾರ ವಾದಿಸಿದೆ. ಈ ಕಾಯ್ದೆಯ ಪ್ರಕಾರ, 10 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ಮತ್ತು ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಸೂಕ್ತವಲ್ಲದ ಹಸುಗಳನ್ನು ಕೊಲ್ಲಲು ಅನುಮತಿ ನೀಡಲಾಗಿದೆ; ಆದರೆ, ಇದಕ್ಕಾಗಿ ಸಮರ್ಥ ಅಧಿಕಾರಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ