ಶ್ರೀರಾಮ ಮಂದಿರ ದೇಣಿಗೆ ಪ್ರಕರಣ; ಕೇಂದ್ರ, ಯುಪಿಗೆ ಸುಪ್ರೀಂ ನೋಟಿಸ್ : Ram Mandir Donation Case

ವಿಶೇಷ ತನಿಖಾ ತಂಡದಿಂದ ತನಿಖೆಯ ವರದಿ ಕೇಳಿದೆ!

ನವ ದೆಹಲಿ – ಶ್ರೀರಾಮಮಂದಿರದ ದೇಣಿಗೆ ಕಳ್ಳತನದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ವೋಚ್ಛ ನ್ಯಾಯಾಲಯವು, ಕೇಂದ್ರ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಿಂದ ಸರ್ವೋಚ್ಚ ನ್ಯಾಯಾಲಯವು ತನಿಖಾ ವರದಿಯನ್ನು ಕೇಳಿದೆ. ಇದರೊಂದಿಗೆ ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ನಿರ್ದೇಶನ ನೀಡಿದೆ. ಈಗ ಈ ಪ್ರಕರಣದ ಮುಂದಿನ ವಿಚಾರಣೆಯು ೨೦ ಜುಲೈ ರಂದು ನಡೆಯಲಿದೆ.

​‘ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ಗೆ ಬಂದ ದೇಣಿಗೆಗಳು ಮತ್ತು ಅರ್ಪಣೆಗಳ ನಿರ್ವಹಣೆಯಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣದ ತನಿಖೆಯು ನ್ಯಾಯಾಲಯದ ಉಸ್ತುವಾರಿಯಲ್ಲಿ ನಡೆಯಬೇಕು ಎಂದು ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯ ವೇಳೆ  ಸವೋಚ್ಛ ನ್ಯಾಯಾಲಯವು ಮೇಲಿನ ನಿರ್ದೇಶನಗಳನ್ನು ನೀಡಿದೆ.