ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ

ಲಾಲೂ ಪ್ರಸಾದ್ ಯಾದವ್

ನವದೆಹಲಿ – ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಿದ ನಂತರ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್‌ನ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಆದಾಗ್ಯೂ, ಬಾಕಿ ಇರುವ ಮೇಲ್ಮನವಿಗಳ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಿದೆ.

ಸಂಪಾದಕೀಯ ನಿಲುವು

ಚೀನಾದಲ್ಲಿ ಭ್ರಷ್ಟರಿಗೆ ಗಲ್ಲು ಶಿಕ್ಷೆ ನೀಡಲಾಗುತ್ತದೆ, ಆದರೆ ಭಾರತದಲ್ಲಿ ಭ್ರಷ್ಟಾಚಾರ ಮಾಡುವವರಿಗೆ ಕಾನೂನಿನ ಹೆಸರಿನಲ್ಲಿ ಎಲ್ಲಾ ಸೌಲಭ್ಯಗಳನ್ನು ಮತ್ತು ರಿಯಾಯಿತಿಗಳನ್ನು ನೀಡಲಾಗುತ್ತದೆ, ಇದು ನ್ಯಾಯವಲ್ಲ, ಅನ್ಯಾಯ!