ರಾಜ್ಯವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ಮಾಡಲು ಮುಖ್ಯಮಂತ್ರಿ ಶಿವಕುಮಾರ ಸಂಕಲ್ಪ !
(ಎಐ ಎಂದರೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಅಂದರೆ ಕೃತಕ ಬುದ್ಧಿಮತ್ತೆ. ಎಐ-ನೇಟಿವ್ ಎಂದರೆ ಕೃತಕ ಬುದ್ಧಿಮತ್ತೆ ಆಧಾರಿತ ನಿರ್ಮಾಣದ ಕೇಂದ್ರ)

ಬೆಂಗಳೂರು – ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘ಗೂಗಲ್ ಐ/ಒ ಕನೆಕ್ಟ್ ಇಂಡಿಯಾ ೨೦೨೬’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೇಶದ ಮೊದಲ ಸರಕಾರಿ ‘ಎಐ’ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಘೋಷಿಸಿದರು.
ಈ ಉಪಕ್ರಮದ ಪ್ರಮುಖ ಉದ್ದೇಶಗಳು ಈ ಕೆಳಗಿನಂತಿವೆ :
೧. ರಾಜ್ಯದ ಅಭಿವೃದ್ಧಿ : ರಾಜ್ಯವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ಮಾಡುವುದು. ರಾಜ್ಯದ ಆಡಳಿತ, ಶಿಕ್ಷಣ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಲ್ಲಿ ‘ಎಐ’ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯನ್ನು ಮಾಡುವ ಮೂಲಕ ಸೇವೆಗಳನ್ನು ಸುಧಾರಿಸುವುದು.
೨. ಸಂಚಾರ ದಟ್ಟಣೆಗೆ ಪರಿಹಾರ: ಬೆಂಗಳೂರಿನ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಉಂಟಾಗುವ ಸಂಚಾರ ದಟ್ಟಣೆಯ ಸಮಸ್ಯೆಗೆ ‘ಎಐ’ ತಂತ್ರಜ್ಞಾನದ ಸಹಾಯದಿಂದ ದೃಢವಾದ ಪರಿಹಾರವನ್ನು ಕಂಡುಕೊಳ್ಳುವುದು.
೩. ತಂತ್ರಜ್ಞಾನ ಕೇಂದ್ರ : ‘ಎಐ’ ನ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಂಶೋಧನೆ, ‘ಡೇಟಾ ಸೆಂಟರ್ಸ್’ ಮತ್ತು ‘ಕ್ಲೌಡ್ ಕಂಪ್ಯೂಟಿಂಗ್’ (ಅಂತರ್ಜಾಲದ ಮೂಲಕ ಕಂಪ್ಯೂಟರ್ ಸೇವೆಗಳು (ಉದಾ. ಡೇಟಾ ಸ್ಟೋರೇಜ್, ಸರ್ವರ್ ಗಳು, ಡೇಟಾಬೇಸ್, ನೆಟ್ ವರ್ಕಿಂಗ್, ಸಾಫ್ಟವೇರ್ ಇತ್ಯಾದಿ) ನಂತಹ ಮೂಲಸೌಕರ್ಯಗಳನ್ನು ವಿಸ್ತರಿಸುವ ಮೂಲಕ ರಾಜ್ಯವನ್ನು ಜಾಗತಿಕ ಮಟ್ಟದಲ್ಲಿ ಒಂದು ಬಲಿಷ್ಠ ತಂತ್ರಜ್ಞಾನ ಹಬ್ (ಕೇಂದ್ರ) ಆಗಿ ಅಭಿವೃದ್ಧಿಪಡಿಸುವುದು.
೪. ಸಹಯೋಗ: ಶೈಕ್ಷಣಿಕ ಸಂಸ್ಥೆಗಳು, ಉದ್ಯಮಗಳು ಮತ್ತು ಸರಕಾರದ ನಡುವಿನ ಸಮನ್ವಯದ ಮೂಲಕ ಹೊಸ ಪೀಳಿಗೆಯ ‘ಎಐ’ ಪ್ರತಿಭೆಗಳನ್ನು ಅಭಿವೃದ್ಧಿಪಡಿಸುವುದು ಸರಕಾರದ ಧ್ಯೇಯವಾಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ