
ನವದೆಹಲಿ – “ನನ್ನ ೩ ಷರತ್ತುಗಳನ್ನು ಸರಕಾರ ಒಪ್ಪಿಕೊಂಡರೆ, ನಾನು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತೇನೆ, ಎಂದು ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿ ಕೊಡುವಂತೆ ಆಗ್ರಹಿಸಿ ಕಳೆದ ೩ ವಾರಗಳಿಂದ ನವದೆಹಲಿಯ ಜಂತರ್-ಮಂತರ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಸೋನಮ್ ವಾಂಗ್ಚುಕ್ ಹೇಳಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಳ್ಳುತ್ತಾ, ಸರಕಾರ ಮತ್ತು ಸಂಸದರ ಮುಂದೆ ತಮ್ಮ ಷರತ್ತುಗಳನ್ನು ಮಂಡಿಸಿದ್ದಾರೆ.
ವಾಂಗ್ಚುಕ್ ಅವರು ಮಾತನಾಡಿ, “ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನಡೆದ ಅಕ್ರಮಗಳ ಹೊಣೆಗಾರಿಕೆಯನ್ನು ಸರಕಾರವೇ ವಹಿಸಿಕೊಳ್ಳಬೇಕು. ನಾನು ಮತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಅಭಿಜಿತ್ ದೀಪ್ಕೆ ಸಂಸತ್ತಿನವರೆಗೆ ಮೆರವಣಿಗೆ ನಡೆಸಿ ತಲುಪಿದರೆ, ಎಲ್ಲಾ ಪಕ್ಷಗಳ ಸಂಸದರು ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಮುಂಗಾರು ಅಧಿವೇಶನದಲ್ಲಿ ಧ್ವನಿ ಎತ್ತುವ ಭರವಸೆ ನೀಡಬೇಕು. ಆರೋಗ್ಯ ಕ್ಷೀಣಿಸುತ್ತಿರುವ ಕಾರಣ ಸಂಸತ್ತಿಗೆ ತೆರಳಲು ಸಾಧ್ಯವಾಗದಿದ್ದರೂ ಸಹ ಸಂಸದರು ಈ ಬೇಡಿಕೆಗಳಿಗಾಗಿ ಸಂಸತ್ತಿನಲ್ಲಿ ಬೆಂಬಲ ನೀಡಿ ಹೋರಾಡುವ ಭರವಸೆ ನೀಡಬೇಕು. ಹೀಗೆ ಮಾಡಿದರೆ ನಾನು ಉಪವಾಸ ಹಿಂಪಡೆಯಲು ಸಿದ್ಧನಿದ್ದೇನೆ,” ಎಂದು ಹೇಳಿದ್ದಾರೆ.
ಪೊಲೀಸರು ಜುಲೈ ೧೮ ರಂದು ವಾಂಗ್ಚುಕ್ ಅವರನ್ನು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸ್ಥಳದಿಂದ ವಶಕ್ಕೆ ಪಡೆದು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು; ಆದರೆ ಸೋನಮ್ ವಾಂಗ್ಚುಕ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಿಲ್ಲ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ