ಸರಕಾರದ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆಂಬ ನೆಪವೊಡ್ಡಿ ವಿರೋಧ ವ್ಯಕ್ತಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಿದ್ದ ಕಾಂಗ್ರೆಸ್ ಸರಕಾರ

ಬೆಂಗಳೂರು – ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಈ ಕೊಲೆಯನ್ನು ವಿರೋಧಿಸಿ ಟ್ವೀಟ್ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ. ಇಂತಹ ಟ್ವೀಟ್ ಮಾಡಿದವರ ಹಿಂದೆ ಬೀಳುವ ರಾಜ್ಯ ಸರಕಾರವು ಅರಾಜಕತೆಯನ್ನು ಸೃಷ್ಟಿಸುತ್ತಿದೆ, ಎಂದು ಉಚ್ಚ ನ್ಯಾಯಾಲಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಾ, ಟ್ವೀಟ್ ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ತಡೆ ನೀಡಿದೆ. ಬಂಟ್ವಾಳದಲ್ಲಿ ಲಾವಣ್ಯ ಎಂಬ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ವಿದ್ಯಾರ್ಥಿ ಕಿರಣ ಆರಾಧ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಆ ಪೋಸ್ಟ್ ಸರಕಾರದ ವರ್ಚಸ್ಸಿಗೆ ಧಕ್ಕೆ ತರುತ್ತಿದೆ ಎಂದು ಹೇಳಿ ಪೊಲೀಸರು ಕಿರಣ ಆರಾಧ್ಯ ಅವರ ವಿರುದ್ಧ ಹೈಗ್ರೌಂಡ್ಸ್ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ಅದನ್ನು ರದ್ದುಗೊಳಿಸಲು ಕಿರಣ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ತಡೆಯಾಜ್ಞೆ ನೀಡಿದೆ.
ಕಿರಣ ಆರಾಧ್ಯ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಎಡಗೈಯಲ್ಲಿ ಗಡಿಯಾರ ಮತ್ತು ಪಾದದ ಹಿಮ್ಮಡಿಗಿಂತ ಮೇಲಕ್ಕೆ ಪ್ಯಾಂಟ್ ಧರಿಸಿದ್ದ ವ್ಯಕ್ತಿಯನ್ನು ತೋರಿಸುತ್ತಾ ‘ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಕೊಲೆ ಮಾಡಿದ ರಾಕ್ಷಸ’ ಎಂದು ಬರೆದಿದ್ದರು.
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ