೯೦೦ ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತ !

ಗೌಹಾಟಿ (ಅಸ್ಸಾಂ): ಅಸ್ಸಾಂನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಬ್ರಹ್ಮಪುತ್ರ ನದಿ ಮತ್ತು ಅದರ ಉಪನದಿಗಳ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ರಾಜ್ಯದ ೨೫ ಜಿಲ್ಲೆಗಳ ೯೦೦ ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತಗೊಂಡಿವೆ. ರಾಜ್ಯದ ಹಲವು ಭಾಗಗಳಲ್ಲಿ ರಸ್ತೆ ಮತ್ತು ರೈಲು ಸಂಚಾರ ಸ್ಥಗಿತಗೊಂಡಿದೆ. ಈ ಪ್ರವಾಹದಿಂದಾಗಿ ೪೧ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜುಲೈ ೨೨ ರ ಸಂಜೆಯ ವೇಳೆಗೆ ೯೯೦ ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
🚨 ASSAM FLOOD CRISIS
Over 900 villages across 25 districts inundated as rivers overflow.
41 lives lost | 990 rescued. Armed Forces, NDRF intensifies rescue under #OperationJalRahat
💰 CM Himanta Biswa Sarma announces ₹4L ex-gratia for victim families.#AssamFloods… pic.twitter.com/wZRlzJFeRO
— Sanatan Prabhat (@SanatanPrabhat) July 23, 2026
ಈ ಕಷ್ಟದ ಸಮಯದಲ್ಲಿ ರಾಜ್ಯ ಸರಕಾರ, ಸೇನಾಪಡೆ, ‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ’ (NDRF) ಮತ್ತು ‘ರಾಜ್ಯ ವಿಪತ್ತು ನಿರ್ವಹಣಾ ಪಡೆ’ (SDRF) ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಭಾರತೀಯ ಸೇನೆಯು ‘ಆಪರೇಷನ್ ಜಲ ರಾಹತ್’ ಅಡಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮಾತನಾಡಿ, “ಸಂತ್ರಸ್ತರಿಗೆ ನೆರವು ಮತ್ತು ರಕ್ಷಣಾ ಕಾರ್ಯಾಚರಣೆ ಸರಕಾರದ ಅತ್ಯುನ್ನತ ಆದ್ಯತೆಯಾಗಿದೆ” ಎಂದು ತಿಳಿಸಿದ್ದಾರೆ. ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ತಲಾ ೪ ಲಕ್ಷ ರೂಪಾಯಿಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation