ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters

ಶಿಮ್ಲಾ – ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಭೂಕುಸಿತದಿಂದಾಗಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ೧೩೬ ರಸ್ತೆಗಳು ಬಂದ್ ಆಗಿವೆ. ರಾಜ್ಯಕ್ಕೆ ಅಂದಾಜು ೧ ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ. ‘ಹಿಮಾಚಲ ಪ್ರದೇಶ ರಾಜ್ಯ ತುರ್ತು ನಿರ್ವಹಣಾ ಪ್ರಾಧಿಕಾರ’ದ ವಿಶೇಷ ಕಾರ್ಯದರ್ಶಿ ಪುಷ್ಪಿಂದರ ರಾಣಾ ಅವರು ಮಾತನಾಡಿ, ಯಾವುದೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣದ ಪ್ರತಿಸ್ಪಂದನೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ತಕ್ಷಣದ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಶಿಮ್ಲಾದ ಭಟ್ಟಾ ಕುಫರ ಹಣ್ಣಿನ ಮಾರುಕಟ್ಟೆಯ ಮೇಲಿರುವ ಶಿವಮಂದಿರದ ಬಳಿ ಭೂಕುಸಿತ ಸಂಭವಿಸಿದ ಪರಿಣಾಮ ಬೆಟ್ಟದಿಂದ ಕಲ್ಲು-ಮಣ್ಣು ದೊಡ್ಡ ಪ್ರಮಾಣದಲ್ಲಿ ಕೆಳಗೆ ಬಿದ್ದಿದೆ. ಇದರಿಂದ ಭಟ್ಟಾ ಕುಫರ ಹಣ್ಣಿನ ಮಾರುಕಟ್ಟೆಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಮಳೆಗೆ ಸಂಬಂಧಿಸಿದ ಘಟನೆಗಳಲ್ಲಿ ೬೬ ಜನರು ಮೃತಪಟ್ಟಿದ್ದಾರೆ.