ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪದಾಧಿಕಾರಿ ಇಂದ್ರೇಶ್ ಕುಮಾರ್ ಅವರ ಆರೋಪ

ಜಮ್ಮು – ದೇಶದಲ್ಲಿನ ರಾಜಕೀಯ ವಾತಾವರಣವನ್ನು ಕೆಡಿಸುವ ಪ್ರಯತ್ನಗಳು ನಡೆಯುತ್ತಿವೆ. ಸೋನಂ ವಾಂಗಚುಕ್ ಮತ್ತು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಇವೆರಡೂ ಸ್ವತಂತ್ರ ಸಂಸ್ಥೆಗಳಾಗಿವೆ. ಸಿಜೆಪಿಯು ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆಯಾಗಿ ಕೆಲಸ ಮಾಡುತ್ತಿದೆ. ಈ ಚಳವಳಿಗೆ ಬೆಂಬಲ ನೀಡುತ್ತಿರುವ ರಾಜಕೀಯ ಪಕ್ಷಗಳಿಗೆ ತಮ್ಮದೇ ಆದ ಅಜೆಂಡಾಗಳಿವೆ. ವಿದೇಶಿಯರ ಕೈಗೊಂಬೆಯಾಗಬೇಡಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪದಾಧಿಕಾರಿ ಇಂದ್ರೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.
ಇಂದ್ರೇಶ್ ಕುಮಾರ್ ಅವರು ಮಾತು ಮುಂದುವರೆಸುತ್ತಾ, ಪ್ರತಿಪಕ್ಷಗಳು ಆರಂಭದಲ್ಲಿ ನೀಟ್ ಪರೀಕ್ಷೆಯ ವಿಷಯವನ್ನು ಪ್ರಸ್ತಾಪಿಸಿದವು; ಆದರೆ ಈಗ ರಾಜಕೀಯ ಲಾಭಕ್ಕಾಗಿ ಚಳವಳಿಯನ್ನು ತಪ್ಪು ದಾರಿಗೆ ಎಳೆಯಲಾಗಿದೆ. ದೇಶವು ವಿಕಸಿತ, ಸಮೃದ್ಧ ಮತ್ತು ಸುಶಿಕ್ಷಿತ ರಾಷ್ಟ್ರವಾಗಿ ಹೊರಹೊಮ್ಮುವುದನ್ನು ತಡೆಯಲು ದೇಶೀಯ ಮತ್ತು ಬಾಹ್ಯ ಶಕ್ತಿಗಳು ಈ ಚಳವಳಿಗಳಿಗೆ ಬೆಂಬಲ ನೀಡುತ್ತಿವೆ ಎಂದರು.
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕೊನೆಗೂ ರಾಜೀನಾಮೆ !
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’