ಶ್ರೀರಾಮಮಂದಿರದ ಕಾಣಿಕೆ ಕಳವು ಪ್ರಕರಣಕ್ಕೆ ಹೊಸ ವಿಶೇಷ ತನಿಖಾ ತಂಡ ರಚನೆ

ತನಿಖೆಯ ವರದಿಯನ್ನು ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ನಡೆದ ಕಾಣಿಕೆ ಕಳವು ಪ್ರಕರಣದಲ್ಲಿ ಉತ್ತರ ಪ್ರದೇಶ ಸರಕಾರವು ೩ ಸದಸ್ಯರ ಹೊಸ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಇದರ ಮುಖ್ಯಸ್ಥರನ್ನಾಗಿ ಲಕ್ಷ್ಮಣಪುರಿಯ ಪೊಲೀಸ್ ಮಹಾ ನಿರೀಕ್ಷಕರಾದ ಕಿರಣ್ ಎಸ್. ಅವರನ್ನು ನೇಮಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಜುಲೈ ೧೩ ರಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಅಧ್ಯಕ್ಷತೆಯಲ್ಲಿ ಹೊಸ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಆದೇಶಿಸಿತ್ತು. ನ್ಯಾಯಾಲಯವು ಜುಲೈ ೨೭ ರಂದು ತನಿಖೆಗೆ ಸಂಬಂಧಿಸಿದ ಪರಿಶೀಲನಾ ವರದಿಯನ್ನು ಸಲ್ಲಿಸಲು ತಿಳಿಸಿದೆ.