ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !

ಐದುವರೆ ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳು ವಶ

ಬಾಗಲಕೋಟೆ – ಐದುವರೆ ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಬೆಳ್ತಂಗಡಿಯ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ ಎಂಬಾತನಿಂದ ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಮಾದಕ ವಸ್ತು ಕಳ್ಳಸಾಗಣೆಯ ದೊಡ್ಡ ಜಾಲ ಬಯಲಾದ ನಂತರ ಪೊಲೀಸರು ಜಲೀಲ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ 4 ಜನರನ್ನು ಬಂಧಿಸಲಾಗಿದೆ. ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ ಜಲೀಲ್ ಬಾಬಾನನ್ನು ಆರೋಪಿಯನ್ನಾಗಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಇಂದಬೆಟ್ಟು ಗ್ರಾಮದ ಮಹಮ್ಮದ್ ಅಲ್ತಾಫ್ (28), ಅಲ್ಫಾಜ್ ಮತ್ತು ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನ್ನು, ಹಾಗೂ ಉಜಿರೆಯ ಮಹಮ್ಮದ್ ಮುಸ್ತಫಾ (28) ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ.

ಆರಂಭದಲ್ಲಿ ಮನ್ನು ಎಂಬಾತನನ್ನು ಬಂಧಿಸಲಾಯಿತು. ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಲುಪಿಸುವ ದೊಡ್ಡ ಗ್ಯಾಂಗ್ ಬಗ್ಗೆ ಈತನಿಂದ ಪೊಲೀಸರಿಗೆ ಪ್ರಮುಖ ಮಾಹಿತಿ ಸಿಕ್ಕಿತು. ಈ ಮಾಹಿತಿಯ ಆಧಾರದ ಮೇಲೆ ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಬಳಿಯ ‘ರಾಯಲ್ ಇನ್ ಲಾಡ್ಜ್’ ಮೇಲೆ ದಾಳಿ ನಡೆಸಿದ ಪೊಲೀಸರು ಇನ್ನು ಮೂವರನ್ನು ಬಂಧಿಸಿದರು. ಆರೋಪಿಗಳು ದೆಹಲಿಯಿಂದ ಮಾದಕ ವಸ್ತುಗಳನ್ನು ತಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಪೂರೈಸಲು ಬೆಂಗಳೂರನ್ನು ಮುಖ್ಯ ಕೇಂದ್ರವನ್ನಾಗಿ ಬಳಸಿಕೊಳ್ಳುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಅನುಮಾನ ಬರದಂತೆ ಮಾದಕ ವಸ್ತುಗಳನ್ನು ಸಾಗಿಸಲು ಜಲೀಲ್ ಬಾಬಾ ತನ್ನ ಆಂಬ್ಯುಲೆನ್ಸ್ ಅನ್ನು ಬಳಸುತ್ತಿದ್ದನು.

ಸಂಪಾದಕೀಯ ನಿಲುವು

ದೇಶದಲ್ಲಿ ಅಲ್ಪಸಂಖ್ಯಾತರಾಗಿರುವವರು ಅಪರಾಧದ ಪ್ರತಿಯೊಂದು ಕ್ಷೇತ್ರದಲ್ಲಿ ಬಹುಸಂಖ್ಯಾತರಾಗಿದ್ದಾರೆ ಎಂಬ ವರದಿಗಳು ಹಲವು ಬಾರಿ ಹೊರಬಂದಿವೆ. ಇಂತಹ ಘಟನೆಗಳು ಈ ಅಂಕಿ-ಅಂಶಗಳು ಸರಿಯಾಗಿವೆ ಎಂಬುದನ್ನು ನಿರಂತರವಾಗಿ ಸಾಬೀತುಪಡಿಸುತ್ತವೆ, ಎಂಬುದನ್ನು ಗಮನಿಸಿ!