ಶ್ರೀರಾಮನವಮಿ ಚೈತ್ರ ಶುಕ್ಲ ನವಮಿ

ಇತಿಹಾಸ

ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುಷ್ಯ ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನ್ಮವಾಯಿತು.

ಮಹತ್ವ

ದೇವತೆಗಳು ಮತ್ತು ಅವತಾರಗಳ ಜನ್ಮತಿಥಿಯಂದು ಭೂಮಿಯ ಮೇಲೆ ಅವರ ತತ್ತ್ವವು ಹೆಚ್ಚು ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತದೆ. ಶ್ರೀರಾಮ ನವಮಿಗೆ ಶ್ರೀರಾಮ ತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶ್ರೀರಾಮ ನವಮಿಗೆ ‘ಶ್ರೀರಾಮ ಜಯ ರಾಮ ಜಯ ಜಯ ರಾಮ |’ ನಾಮಜಪ, ಹಾಗೆಯೇ ಶ್ರೀರಾಮನ ಇತರ ಉಪಾಸನೆಗಳನ್ನು ಭಾವಪೂರ್ಣವಾಗಿ ಮಾಡುವುದರಿಂದ ಶ್ರೀರಾಮತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆಯಲು ಸಹಾಯವಾಗುತ್ತದೆ.