ಜಮ್ಮು – ಕಾಶ್ಮೀರದ ಮಾಜಿ ಪೊಲೀಸ್ ಮಹಾನಿರ್ದೇಶಕ ಎಸ್.ಪಿ. ವೇದ ಇವರ ಸಲಹೆ

ತಮ್ಮ ರಕ್ಷಣೆಗಾಗಿ ಕಾಶ್ಮೀರಿ ಹಿಂದೂಗಳಿಗೆ ಶಸ್ತ್ರಾಸ್ತ್ರಗಳನ್ನು ನೀಡಿ !

ಹಿರಿಯ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಇಂತಹ ಸಲಹೆಗಳನ್ನು ನೀಡುತ್ತಾರೆ, ಇದು ಇಂದಿನವರೆಗಿನ ಸರಕಾರಗಳು, ಪೊಲೀಸ್ ಮತ್ತು ಆಡಳಿತದ ವೈಫಲ್ಯವೇ ಆಗಿದೆ !

ಬೆರಳೆಣಿಕೆಯಷ್ಟು ಜಿಹಾದಿ ಭಯೋತ್ಪಾದಕರನ್ನು ಮಟ್ಟಹಾಕಲು ಸಾಧ್ಯವಾಗದ ಹಿಂದಿನ ಎಲ್ಲ ಸರಕಾರಗಳಿಗೆ ನಾಚಿಕೆಯ ವಿಷಯವಾಗಿದೆ ! ಈ ಪರಿಸ್ಥಿತಿಯನ್ನು ಬದಲಾಯಿಸಲು ಹಿಂದೂ ರಾಷ್ಟ್ರವೇ ಬೇಕು !

ಶ್ರೀನಗರ : ಭಯೋತ್ಪಾದನೆ ವಿರುದ್ಧ ಹೋರಾಡಲು ಕಾಶ್ಮೀರ ಕಣಿವೆಯಲ್ಲಿರುವ ಹಿಂದೂ ಅಲ್ಪಸಂಖ್ಯಾತರಿಗೆ ತಮ್ಮ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸಬೇಕು, ಎಂದು ಜಮ್ಮು ಕಾಶ್ಮೀರದ ಮಾಜಿ ಪೊಲೀಸ್ ಮಹಾನಿರ್ದೇಶಕ ಎಸ್.ಪಿ. ವೇದ ಇವರು ಆಂಗ್ಲ ಸುದ್ದಿವಾಹಿನಿಯೊಂದರಲ್ಲಿ ಮಾತನಾಡುತ್ತಾ ಹೇಳಿದರು. ಕಾಶ್ಮೀರಿ ಹಿಂದೂಗಳಾದ ಪಂಚಾಯತಿಯ ಅಧ್ಯಕ್ಷ ಅಜಯ ಪಂಡಿತಾ ಅವರನ್ನು ಜಿಹಾದಿ ಉಗ್ರರು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಅವರು ಈ ಸಲಹೆ ನೀಡಿದರು. ಕಾಶ್ಮೀರ ಕಣಿವೆಯಲ್ಲಿರುವ ಅಸುರಕ್ಷಿತ ಮುಸಲ್ಮಾನರಿಗೂ ಶಸ್ತ್ರಾಸ್ತ್ರಗಳನ್ನು ನೀಡಬೇಕು ಎಂದರು. ಆದರ್ಶ ರಾಜ್ಯಾಡಳಿತವನ್ನು ನಡೆಸಿದ ಶಿವಾಜಿ ಮಹಾರಾಜರ ಆದರ್ಶವನ್ನು ಇಟ್ಟುಕೊಳ್ಳಬೇಕು !