ರಾಷ್ಟ್ರಪತಿ ರಾಮನಾಥ ಕೋವಿಂದ ಇವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ನವ ದೆಹಲಿ – ಚೀನಾದೊಂದಿಗೆ ನಡೆಯುತ್ತಿರುವ ಘರ್ಷಣೆಯ ಹಿನ್ನಲೆಯಲ್ಲಿ ಪ್ರಧಾನಿ ಮೋದಿಯವರು ಜುಲೈ ೫ ರಂದು ಬೆಳಿಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಇವರನ್ನು ಭೇಟಿಯಾದರು. ಸುಮಾರು ಅರ್ಧಗಂಟೆ ಭೇಟಿ ಮಾಡಿದ ಸಮಯದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಷಯದ ಬಗ್ಗೆ ಮಹತ್ವದ ಅಂಶಗಳ ಬಗ್ಗೆ ಚರ್ಚೆಯನ್ನು ಮಾಡಿದ್ದಾರೆ.