ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಓರ್ವ ಸೈನಿಕ ಹುತಾತ್ಮ

ರಾಜೌರಿ (ಜಮ್ಮು-ಕಾಶ್ಮೀರ) – ರಾಜೌರಿ ಪ್ರದೇಶದಲ್ಲಿ ನೌಶಾರಾ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಸೈನಿಕರು ಕದನವಿರಾಮವನ್ನು ಉಲ್ಲಂಘಿಸಿ ಮಾಡಿದ ಗುಂಡಿನ ದಾಳಿಯಲ್ಲಿ ಭಾರತದ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಪಾಕಿಸ್ತಾನದ ಈ ಗುಂಡಿನ ದಾಳಿಗೆ ಭಾರತವೂ ತಕ್ಕ ಪ್ರತ್ಯುತ್ತರ ನೀಡಿದೆ.