ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ ! – ರಮೇಶ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಸಚಿವ

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಸಂಚಾರ ನಿಷೇಧ ಜಾರಿಗೊಳಿಸುವುದಿಲ್ಲ. ರಾಜ್ಯದ ಮುಖ್ಯಮಂತ್ರಿಯವರೂ ಇದರ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ಹೇಳಿದ್ದಾರೆ. ಜುಲೈ ೨೦ ರಂದು ಇದರ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಕೊರೋನಾ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇತರ ಅಗತ್ಯ ಉಪಾಯಯೋಜನೆಗಳನ್ನು ಮಾಡುವ ದೃಷ್ಟಿಯಿಂದ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ, ಅದೇ ರೀತಿ ನಾಗರಿಕರಿಗೆ ನಿಯಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ. ತುರ್ತು ವೈದ್ಯಕೀಯ ಸೌಲಭ್ಯಗಳನ್ನು ನೀಡಲು ಆಂಬ್ಯುಲೆನ್ಸ್ ಒದಗಿಸಲು ಖಾಸಗಿ ಸಂಸ್ಥೆಗಳ ಸಹಾಯ ತೆಗೆದುಕೊಳ್ಳಲಾಗುವುದು, ಅದೇರೀತಿ ಸದ್ಯ ನಿಂತಿರುವ ‘ಕ್ಯಾಬ್’ನ ಚಾಲಕರನ್ನು ಆಂಬ್ಯುಲೆನ್ಸ್ ಸೇವೆಯಲ್ಲಿ ತೊಡಗಿಸಿಕೊಳ್ಳಲಾಗುವುದು, ಎಂದೂ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.