೧. ಮೂರ್ತಿಯು ದೇವತೆಯ ಮೂಲ ರೂಪದೊಂದಿಗೆ ಎಷ್ಟು ಹೋಲುತ್ತದೆಯೋ, ಅಷ್ಟೇ ಹೆಚ್ಚು ಪ್ರಮಾಣದಲ್ಲಿ ಆ ದೇವತೆಯ ತತ್ತ್ವವು ಮೂರ್ತಿಯ ಕಡೆಗೆ ಆಕರ್ಷಿತವಾಗುತ್ತದೆ. ಋಷಿಮುನಿಗಳು ಮತ್ತು ಸಂತರು ಶಾಸ್ತ್ರಗಳನ್ನು ಬರೆದಿದ್ದಾರೆ. ಅವರಿಗೆ ದೇವತೆಗಳ ಸಾಕ್ಷಾತ್ಕಾರವು ಹೇಗೆ ಆಗಿದೆಯೋ, ಹಾಗೇ ಅವರು ದೇವತೆಗಳನ್ನು ಶಾಸ್ತ್ರದಲ್ಲಿ ವರ್ಣಿಸಿದ್ದಾರೆ; ಆದುದರಿಂದ ಶಾಸ್ತ್ರದಲ್ಲಿ ಹೇಳಿದಂತೆ ಮೂರ್ತಿಯನ್ನು ತಯಾರಿಸಿದರೆ ಅದು ಸಾತ್ತ್ವಿಕವಾಗುತ್ತದೆ.
೨. ಅಧ್ಯಾತ್ಮಶಾಸ್ತ್ರದ ದೃಷ್ಟಿಯಿಂದ ಪ್ರತಿಯೊಂದು ದೇವತೆ ಎಂದರೆ ಒಂದು ವಿಶಿಷ್ಟ ತತ್ತ್ವವಾಗಿದೆ. ‘ಶಬ್ದ, ಸ್ಪರ್ಶ, ರೂಪ, ರಸ, ಗಂಧ ಮತ್ತು ಅವುಗಳಿಗೆ ಸಂಬಂಧಿಸಿದ ಶಕ್ತಿ ಒಟ್ಟಿಗೆ ಇರುತ್ತವೆ, ಈ ಸಿದ್ಧಾಂತಕ್ಕನುಸಾರ ಮೂರ್ತಿವಿಜ್ಞಾನದಂತೆ ಮೂರ್ತಿಯನ್ನು ತಯಾರಿಸಿದರೆ ಆ ಮೂರ್ತಿಯಲ್ಲಿ ಆ ದೇವತೆಯ ತತ್ತ್ವವು ಆಕರ್ಷಿತವಾಗುತ್ತದೆ. (ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಕಿರುಗ್ರಂಥ ‘ಶ್ರೀ ಗಣೇಶಮೂರ್ತಿಯು ಶಾಸ್ತ್ರಾಕ್ಕನುಸಾರ ಇರಬೇಕು)
ಶ್ರೀಗಣೇಶ ಮೂರ್ತಿಯ ಅಲಂಕಾರ ಹೀಗಿರಲಿ !
ಇತ್ತೀಚೆಗೆ ಗಣೇಶೋತ್ಸವಕ್ಕಾಗಿ ಮಾಡಲಾಗುವ ಅಲಂಕಾರಕ್ಕಾಗಿ ವಿವಿಧ ರೀತಿಯ ಬಣ್ಣಗಳಿಂದ ಹಾಗೂ ಮಿನುಗುವ ಕಾಗದ, ಥರ್ಮಾಕೋಲ್, ಪ್ಲಾಸ್ಟಿಕ್ ಮುಂತಾದವುಗಳನ್ನು ಉಪಯೋಗಿಸ ಲಾಗುತ್ತದೆ. ಅಲ್ಲದೇ ಬಣ್ಣಬಣ್ಣದ ವಿದ್ಯುತ್ ದೀಪಗಳ ಮಾಲೆಯನ್ನೂ ಬಳಸಲಾಗುತ್ತದೆ. ಈ ವಸ್ತುಗಳನ್ನು ಕೃತಕ ಹಾಗೂ ರಾಸಾಯನಿಕ ವಸ್ತುಗಳಿಂದ ತಯಾರಿಸಲಾಗುತ್ತದೆ. ಹಾಗಾಗಿ ಈ ವಸ್ತುಗಳಲ್ಲಿ ರಜ-ತಮದ ಪ್ರಮಾಣವು ಹೆಚ್ಚಿರುತ್ತದೆ ಅಲ್ಲದೇ ಅಂತಹವುಗಳು ವಾತಾವರಣದಲ್ಲಿನ ರಜತಮವನ್ನು ಆಕರ್ಷಿಸಿ ಅಲ್ಲಿನ ಪರಿಸರವನ್ನು ರಜ-ತಮಯುಕ್ತಗೊಳಿಸುತ್ತದೆ. ಆಧ್ಯಾತ್ಮಿಕ ದೃಷ್ಟಿಯಿಂದ ಪ್ರತಿಯೊಂದು ದೇವತೆಯಲ್ಲಿ ಒಂದು ವಿಶಿಷ್ಟ ತತ್ತ್ವವಿರುತ್ತದೆ. ಹಾಗಾಗಿ ಗಣೇಶ ಚತುರ್ಥಿಯಂದು ಪೃಥ್ವಿಯಲ್ಲಿ ಹೆಚ್ಚು ಪ್ರಮಾಣದಲ್ಲಿ ಬರುವ ಗಣೇಶತತ್ತ್ವವನ್ನು ಆಕರ್ಷಿಸುವ ಸಾತ್ವಿಕ ವಸ್ತುಗಳನ್ನು ಬಳಸಬೇಕು. ಅದಕ್ಕೆ ಕೆಳಗಿನ ವಸ್ತುಗಳನ್ನು ಬಳಸಿರಿ.
- ನೈಸರ್ಗಿಕ ಹೂವು-ಎಲೆಗಳಿಂದ ತಯಾರಿಸಿದ ತೋರಣಗಳು
- ಕೆಂಪು ಬಣ್ಣದ ಹೂವು ಹಾಗೂ ದೂರ್ವೆ, ಶಮಿಯ ಎಲೆಗಳು
- ಶ್ರೀಗಣೇಶನತತ್ತ್ವವನ್ನು ಆಕರ್ಷಿಸುವ ರಂಗೋಲಿ
- ಶ್ರೀಗಣೇಶನಸಾತ್ವಿಕ ನಾಮಜಪದ ಪಟ್ಟಿಗಳು ಇತ್ಯಾದಿ.
ಚಂದ್ರ, ಮನಸ್ಸು ಮತ್ತು ಗಣೇಶ ಚತುರ್ಥಿ ಇವುಗಳ ಸಂಬಂಧ
೧. ಸೌರಮಂಡಲದಲ್ಲಿನ ಎಲ್ಲ ಗ್ರಹಗಳಲ್ಲಿ ಚಂದ್ರಗ್ರಹವು ಅತ್ಯಂತ ಚಂಚಲವಾಗಿದೆ ಆದುದರಿಂದ ಚಂಚಲ ಸ್ವಭಾವವಿರುವವರ ಮನಸ್ಸಿನ ಮೇಲೆ ಚಂದ್ರನ ಸ್ಪಂದನಗಳು ಹೆಚ್ಚು ಕಾರ್ಯ ಮಾಡುತ್ತವೆ.
೨. ಪೃಥ್ವಿಯಿಂದ ಚಂದ್ರಗ್ರಹದ ದರ್ಶನವನ್ನು ನಾವು ಸಹಜವಾಗಿ ಪಡೆದುಕೊಳ್ಳಬಹುದು ಮತ್ತು ಅದನ್ನು ನಾವು ಮನಸ್ಸಿನಲ್ಲಿ ಅತ್ಯಂತ ಸಹಜವಾಗಿ ಯಾವಾಗ ಬೇಕಾದರೂ ನೋಡಬಹುದು.
೩. ಪರಿಣಾಮ : ಗಣೇಶ ಚತುರ್ಥಿಯ ದಿನ ಬ್ರಹ್ಮಾಂಡದಲ್ಲಿ ನಿರ್ಮಾಣವಾಗುವ ರಜೋಗುಣದ ಸ್ಪಂದನಗಳು ಚಂದ್ರನ ಕಡೆಗೆ ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿತವಾಗಿ ಚಂಚಲ ಮನಸ್ಸಿರುವ ಮನುಷ್ಯರ ಕಡೆಗೆ ಆಕರ್ಷಿಸಲ್ಪಡುತ್ತವೆ.
ಗಣೇಶ ಚತುರ್ಥಿಯ ದಿನ ಚಂದ್ರನ ದರ್ಶನವನ್ನು ಪಡೆಯಬಾರದು ಎಂಬುದರ ಹಿಂದಿನ ಕಾರಣವೇನು ?
ಮನಸ್ಸಿನ ಚಂಚಲತೆಯು ಸುಮಾರು ಒಂದು ವರ್ಷದವರೆಗೆ ಉಳಿಯುತ್ತದೆ. ಮನಸ್ಸಿನ ಚಂಚಲತೆಯ ಪ್ರಚಂಡ ಪ್ರಭಾವದಿಂದಾಗಿ ಯಾವುದಾದರೊಂದು ಘಟನೆಯು ಘಟಿಸುವ ಮೊದಲೇ ಅದು ಘಟಿಸಿ ಹೋಗಿದೆ ಎಂಬ ತಪ್ಪುತಿಳುವಳಿಕೆ ಅಥವಾ ಗಾಳಿ ಸುದ್ದಿ ಹರಡುವ ಸಾಧ್ಯತೆ ಇರುತ್ತದೆ. ಇದನ್ನೇ ಯಾವುದಾದರೊಂದು ಅಡಚಣೆಯನ್ನು ಮೈಮೇಲೆ ಎಳೆದುಕೊಳ್ಳುವುದು ಎಂದು ಹೇಳುತ್ತಾರೆ. ಈ ಕಾರಣಕ್ಕಾಗಿ ಗಣೇಶ ಚತುರ್ಥಿಯ ದಿನ ಚಂದ್ರನನ್ನು ನೋಡುವುದು ಅಶುಭವೆಂದು ತಿಳಿದುಕೊಳ್ಳುತ್ತಾರೆ.
ಪೂಜಾಸ್ಥಳದ ಶುದ್ಧೀಕರಣ ಮತ್ತು ಉಪಕರಣಗಳಲ್ಲಿನ ದೇವತ್ವವನ್ನು ಜಾಗೃತಗೊಳಿಸುವುದು
ಪೂಜಾಸ್ಥಳದ ಶುದ್ಧೀಕರಣ
ಅ. ಪೂಜೆ ಮಾಡುವವನು ಆ ಕೋಣೆಯ ಕಸ ಗುಡಿಸಬೇಕು. ಆದಷ್ಟು ಪೂಜೆ ಮಾಡುವ ವ್ಯಕ್ತಿಯೇ ಕಸ ಗುಡಿಸಬೇಕು.
ಆ. ಕಸ ಗುಡಿಸಿದ ನಂತರ ಕೋಣೆಯಲ್ಲಿನ ನೆಲವು ಮಣ್ಣಿನದ್ದಾಗಿದ್ದರೆ, ನೆಲವನ್ನು ಸೆಗಣಿಯಿಂದ ಸಾರಿಸಬೇಕು. ಮಣ್ಣಿನ ನೆಲವಲ್ಲದಿದ್ದರೆ ಸ್ವಚ್ಛ ನೀರಿನಿಂದ ನೆಲ ಒರೆಸಬೇಕು.
ಇ. ಮಾವಿನ ಅಥವಾ ತುಳಸೀ ಎಲೆಯಿಂದ ಕೋಣೆಯಲ್ಲಿ ಗೋಮೂತ್ರವನ್ನು ಸಿಂಪಡಿಸಬೇಕು. ಗೋಮೂತ್ರವಿಲ್ಲದಿದ್ದರೆ ನೀರಿನಲ್ಲಿ ಊದುಬತ್ತಿಯ ವಿಭೂತಿ ಹಾಕಿ ಆ ನೀರನ್ನು ಕೋಣೆಯಲ್ಲಿ ಸಿಂಪಡಿಸಬೇಕು. ಅನಂತರ ಕೋಣೆಯಲ್ಲಿ ಧೂಪ ಹಾಕಬೇಕು.
ಉಪಕರಣಗಳಲ್ಲಿನ ದೇವತ್ವದ ಜಾಗೃತಿ
ದೇವರ ಪೂಜೆಯ ಉಪಕರಣಗಳನ್ನು ತಿಕ್ಕಿ ತೊಳೆದ್ಳುಒರೆಸಿ ಸ್ವಚ್ಛಗೊಳಿಸಬೇಕು. ಅನಂತರ ಅವುಗಳ ಮೇಲೆ ತುಳಸೀ ಎಲೆ ಅಥವಾ ದೂರ್ವೆ ಇವುಗಳಿಂದ ಜಲಪ್ರೋಕ್ಷಣ (ನೀರು ಸಿಂಪಡಿಸುವುದು) ಮಾಡಬೇಕು.