ಸನಾತನದ ಗ್ರಂಥಗಳನ್ನು ಕನ್ನಡ ಭಾಷೆಗೆ ಅನುವಾದ ಮಾಡಲು ಸಹಾಯ ಮಾಡಬೇಕಾಗಿ ವಿನಂತಿ !

ಅಧ್ಯಾತ್ಮದ ಜಿಜ್ಞಾಸುಗಳು, ವಿವಿಧ ಯೋಗಮಾರ್ಗಗಳಿಗನುಸಾರ ಸಾಧನೆ ಮಾಡುವ ಸಾಧಕರು ಮತ್ತು ಧರ್ಮಪ್ರೇಮಿಗಳಿಗೆ ಆಧ್ಯಾತ್ಮಿಕ ಪ್ರಗತಿಗಾಗಿ ಮಾರ್ಗದರ್ಶನವಾಗಬೇಕು ಮತ್ತು ಹಿಂದೂ ರಾಷ್ಟ್ರದ ಸ್ಥಾಪನೆಯಾಗಬೇಕು ಎಂಬುದಕ್ಕಾಗಿ ಸನಾತನವು ಆಚಾರಧರ್ಮ, ಧಾರ್ಮಿಕ ಕೃತಿ, ದೇವತೆಗಳು, ಸಾಧನೆ, ರಾಷ್ಟ್ರರಕ್ಷಣೆ, ಧರ್ಮಜಾಗೃತಿ ಮುಂತಾದ ವಿಷಯಗಳ ಬಗ್ಗೆ ಗ್ರಂಥ ಮತ್ತು ಕಿರುಗ್ರಂಥಗಳನ್ನು ಪ್ರಕಾಶಿಸಿದೆ. ಈ ಜ್ಞಾನದಿಂದ ಕೇವಲ ಭಾರತ ಮಾತ್ರವಲ್ಲ ಜಗತ್ತಿನೆಲ್ಲೆಡೆಯ ಮಾನವರಿಗೆ ಲಾಭವಾಗುತ್ತಿದ್ದು ಅವರ ಜೀವನ ಉದ್ಧಾರವಾಗುತ್ತಿದೆ. ಗ್ರಂಥ ನಿರ್ಮಿತಿ ಪ್ರಕ್ರಿಯೆಯು ನಿರಂತರವಾಗಿ ನಡೆಯುತ್ತಿದ್ದು ಆಗಸ್ಟ್  ೨೦೨೦ ರವರೆಗೆ ಸನಾತನದ ೩೨೪ ಗ್ರಂಥಗಳ ೧೭ ಭಾಷೆಗಳಲ್ಲಿ ೮೦,೧೮,೦೦೦ ಪ್ರತಿಗಳನ್ನು ಪ್ರಕಟಿಸಲಾಗಿದ್ದು, ಇನ್ನೂ ೮೦೦೦ ಗ್ರಂಥಗಳನ್ನು ಪ್ರಕಟಿಸುವಷ್ಟು ಜ್ಞಾನ ಸಂಗ್ರಹವಾಗಿದೆ. ಈ ಅಗಾಧ ಪ್ರಮಾಣದಲ್ಲಿರುವ ಗ್ರಂಥಸಂಪತ್ತನ್ನು ಮರಾಠಿಯಿಂದ ಕನ್ನಡ ಭಾಷೆಗೆ ಅನುವಾದ ಮಾಡುವ ಸೇವೆಯಲ್ಲಿ ಭಾಗಿಯಾಗುವುದೆಂದರೆ ಈ ಧರ್ಮಕಾರ್ಯದ ಸುವರ್ಣಾವಕಾಶವೇ ಆಗಿದೆ. ಅನುವಾದ ಮಾಡುವವರಿಗೆ ಮರಾಠಿ ಮತ್ತು ಕನ್ನಡ ಭಾಷೆಯ ಸಂಪೂರ್ಣ ಜ್ಞಾನವಿರಬೇಕು, ಗಣಕಯಂತ್ರದಲ್ಲಿ ಬೆರಳಚ್ಚು ಮಾಡುವುದು ಮತ್ತು ಅಂತರ್ಜಾಲದ ಮಾಹಿತಿಯಿರಬೇಕು. ಆಸಕ್ತಿಯಿರುವ ಧರ್ಮಾಭಿಮಾನಿಗಳು ಸಂಪರ್ಕಿಸಬೇಕಾಗಿ ವಿನಂತಿಸುತ್ತೇವೆ.

ಸಂಪರ್ಕ ಕ್ರ. : 9342435617

ವಿ-ಅಂಚೆ : [email protected]