ಕೊರೋನಾದ ಎರಡನೇ ಅಲೆಯ ಸಂಕೇತದಿಂದ ಬ್ರಿಟನ್‌ನಲ್ಲಿ ಮತ್ತೆ ಸಂಚಾರ ನಿಷೇಧ ಜಾರಿಗೊಳಿಸಲಾಗಿದೆ

ಲಂಡನ್ – ಬ್ರಿಟನ್‌ನಲ್ಲಿ ಕೊರೋನಾದ ಎರಡನೇ ಅಲೆ ಬರುವ ಸಾಧ್ಯತೆಗಳಿವೆ. ಈ ಬಗ್ಗೆ ಶೀಘ್ರವಾಗಿ ಕ್ರಮಗಳನ್ನು ಕೈಗೊಳ್ಳದೇ ಇದ್ದರೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಬ್ರಿಟನ್‌ನ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಅದೇರೀತಿ ಕೊರೋನಾ ಪೀಡಿತ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು ಅದರ ಸೋಂಕು ಹರಡುವುದನ್ನು ತಡೆಗಟ್ಟಲು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೆಪ್ಟೆಂಬರ್ ೨೪ ರಂದು ರಾತ್ರಿ ೧೦ ಗಂಟೆಯಿಂದ ಎಲ್ಲಾ ಪಬ್‌ಗಳು, ಬಾರ್‌ಗಳು ಮತ್ತು ಹೋಟೆಲ್‌ಗಳನ್ನು ಮುಚ್ಚುವಂತೆ ಆದೇಶಿಸಿದ್ದಾರೆ. ಜೊತೆಗೆ ‘ಸಾಧ್ಯವಾದರೆ ಮನೆಯಿಂದಲೇ ಕೆಲಸ ಮಾಡುವಂತೆ’ ಜನರಿಗೆ ಕರೆ ನೀಡಿದ್ದಾರೆ.

ಜಾನ್ಸನ್ ತಮ್ಮ ಮಾತನ್ನು ಮುಂದುವರೆಸುತ್ತಾ, ಕೊರೋನಾ ಸೋಂಕು ತಡೆಗಟ್ಟದಿದ್ದರೆ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು. ನಾವು ದೊಡ್ಡ ಪ್ರಮಾಣದ ನಿರ್ಬಂಧಗಳನ್ನು ವಿಧಿಸುವ ಹಕ್ಕನ್ನು ಕಾಯ್ದಿರಿಸಿದ್ದೇವೆ. ಜೀವನಶೈಲಿಯ ಬದಲಾವಣೆ ಮತ್ತು ಹೊಸ ಕ್ರಮಗಳನ್ನು ಜಾರಿಗೊಳಿಸಿದರೆ, ಕಟ್ಟುನಿಟ್ಟಾದ ನಿರ್ಬಂಧ ಹೇರುವ ಸನ್ನಿವೇ? ಬರುವುದಿಲ್ಲ. ಇದನ್ನು ‘ಅಸೋಸಿಯೇಟೆಡ್ ಪ್ರೆಸ್’ ವರದಿ ಮಾಡಿದೆ.