ಶ್ರೀಕೃಷ್ಣ ಜನ್ಮಭೂಮಿಯ ಮೇಲೆ ಶಾಹಿ ಈದ್ಗಾ ಮಸೀದಿಯಿಂದಾಗಿರುವ ಅತಿಕ್ರಮಣವನ್ನು ತೆರವುಗೊಳಿಸಬೇಕೆಂದು ಅರ್ಜಿ ಮಥುರಾ ನ್ಯಾಯಾಲಯದಿಂದ ತಿರಸ್ಕೃತ

ಮಥುರಾ (ಉತ್ತರ ಪ್ರದೇಶ) – ಮಥುರಾದ ಶ್ರೀಕೃಷ್ಣ ಜನ್ಮಭೂಮಿಗೆ ಸೇರಿದ ೧೩.೩೭ ಎಕರೆ ಜಮೀನಿನ ಮಾಲೀಕತ್ವ ಮತ್ತು ಈ ಭೂಮಿಯಲ್ಲಿ ಶಾಹಿ ಈದ್ಗಾ ಮಸೀದಿಯಿಂದಾಗಿರುವ ಅತಿಕ್ರಮಣ ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸೆಪ್ಟೆಂಬರ್ ೩೦ ರಂದು ಮಥುರಾ ನ್ಯಾಯಾಲಯ ತಿರಸ್ಕರಿಸಿದೆ. ಭಗವಾನ್ ಕೃಷ್ಣ ವಿರಾಜಮಾನ್, ಕಟರಾ ಕೇಶವ ದೇವ ಖೇವಾಟ್, ರಂಜನಾ ಅಗ್ನಿಹೋತ್ರಿ ಸೇರಿದಂತೆ ಒಟ್ಟು ಆರು ಮಂದಿ ಅರ್ಜಿ ಸಲ್ಲಿಸಿದ್ದರು. ಪೂ. (ನ್ಯಾಯವಾದಿ) ಹರಿಶಂಕರ ಜೈನ್ ಮತ್ತು ನ್ಯಾಯವಾದಿ ವಿಷ್ಣು ಶಂಕರ ಜೈನ್ ಮೂಲಕ ಅರ್ಜಿ ಸಲ್ಲಿಸಿದ್ದರು. (ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳು ತಮ್ಮ ಹಕ್ಕಿಗಾಗಿ ಇಂತಹ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಇದು ಅತ್ಯಂತ ನಾಚಿಕೆ ಗೇಡಿನ ಸಂಗತಿಯಾಗಿದೆ. – ಸಂಪಾದಕರು)