ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರಪ್ರದೇಶದ ಎಲ್ಲ ತಾಯಂದಿರು ಹಾಗೂ ಸಹೋದರಿಯರ ಗೌರವ ಮತ್ತು ಸ್ವಾಭಿಮಾನವನ್ನು ಕೆಡಿಸಲು ಪ್ರಯತ್ನಿಸುವವರ ನಾಶ ಖಚಿತವಿದೆ. ಭವಿಷ್ಯದಲ್ಲಿ ಅದನ್ನು ಉದಾಹರಣೆಯಾಗಿ ನೋಡುವ ರೀತಿಯಲ್ಲಿ ಅವರಿಗೆ ಶಿಕ್ಷೆಯಾಗುವುದು. ನಿಮ್ಮ ಉತ್ತರ ಪ್ರದೇಶ ಸರಕಾರ ಪ್ರತಿಯೊಬ್ಬ ತಾಯಿ ಮತ್ತು ಸಹೋದರಿಯ ರಕ್ಷಣೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ. ಇದು ನಮ್ಮ ಸಂಕಲ್ಪ ಹಾಗೂ ನಮ್ಮ ಭರವಸೆಯಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದ ಹತ್ರಾಸ್‌ನಲ್ಲಿ ೧೯ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಥಳಿಸಿದ ನಂತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ದೇಹವನ್ನು ಶವಸಂಸ್ಕಾರ ಮಾಡಲು ಕುಟುಂಬಕ್ಕೆ ಅವಕಾಶ ನೀಡಲಿಲ್ಲ ಎಂಬ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ತದನಂತರ ಅವರು ಈ ಹೇಳಿಕೆ ನೀಡಿದ್ದಾರೆ.
उत्तर प्रदेश में माताओं-बहनों के सम्मान-स्वाभिमान को क्षति पहुंचाने का विचार मात्र रखने वालों का समूल नाश सुनिश्चित है।
इन्हें ऐसा दंड मिलेगा जो भविष्य में उदाहरण प्रस्तुत करेगा।
आपकी @UPGovt प्रत्येक माता-बहन की सुरक्षा व विकास हेतु संकल्पबद्ध है।
यह हमारा संकल्प है-वचन है।
— Yogi Adityanath (@myogiadityanath) October 2, 2020