|
|
ಪಾಲಕ್ಕಾಡ್ (ಕೇರಳ) – ಮೂರು ವರ್ಷಗಳ ಹಿಂದೆ ಓರ್ವ ಮಹಿಳೆಯ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವಾಲಯಾರನಲ್ಲಿ ಸಂಶಯಾಸ್ಪದವಾಗಿ ಹತ್ಯೆ ಮಾಡಲಾಗಿತ್ತು. ಹತ್ಯೆ ಮಾಡುವ ಮೊದಲು ಅವರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಈ ಪ್ರಕರಣದಲ್ಲಿ ಕಳೆದ ವರ್ಷ ನ್ಯಾಯಾಲಯದಿಂದ ಖುಲಾಸೆಗೊಂಡ ನಾಲ್ವರು ಆರೋಪಿಗಳು ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಎಂದು ಹೇಳಲಾಗಿದೆ. ಈಗ ಈ ಹುಡುಗಿಯರ ತಾಯಿ ನ್ಯಾಯ ಪಡೆಯಲು ಮತ್ತೆ ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಈ ಪ್ರಕರಣದ ೬ ಆರೋಪಿಗಳಲ್ಲಿ ೫ ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ೬ ನೇ ಆರೋಪಿಗಳನ್ನು ಏಕೆ ಬಂಧಿಸಲಾಗಿಲ್ಲ ? ಅಂತಹ ಪ್ರಶ್ನೆಯನ್ನು ಪ್ರಸ್ತುತಪಡಿಸಿದ್ದಾರೆ.
೧. ಈ ಘಟನೆಯ ತನಿಖೆಯನ್ನು ಯೋಗ್ಯ ರೀತಿಯಲ್ಲಿ ಮಾಡಿಲ್ಲ ಎಂದು ಕಳೆದ ತಿಂಗಳು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡಿದ್ದರು. ಆದ್ದರಿಂದ ನಾವು ಮತ್ತೆ ವಿಚಾರಣೆ ನಡೆಸುತ್ತೇವೆ. (ಯೋಗ್ಯರೀತಿಯಲ್ಲಿ ತನಿಖೆಯನ್ನು ಮಾಡದಿರುವ ಸಂಬಂಧಪಟ್ಟ ಪೊಲೀಸರ ವಿರುದ್ಧ ಸರಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಮತ್ತು ಅದನ್ನು ಯಾವಾಗ ಕೈಗೊಳ್ಳಲಿದೆ ಎಂದು ವಿಜಯನ್‌ರು ಹೇಳಬೇಕು ! – ಸಂಪಾದಕ)
೨. ಸೆಂಟ್ರಲ್ ಬ್ಯೂರೋ ಆಫ್ ಇನ್‌ವೆಸ್ಟಿಗೇಷನ್ (ಸಿಬಿಐ)ನಿಂದ ವಿಚಾರಣೆ ನಡೆಸಬೇಕೆಂದು ಕೋರಿ ಹುಡುಗಿಯರ ತಾಯಿ ಉಚ್ಚ ನ್ಯಾಯಾಲಯದಲ್ಲಿ ಬೇಡಿಕೆ ಸಲ್ಲಿಸಿದ್ದರು.
೩. ಪ್ರತಿಪಕ್ಷದ ನಾಯಕ ರಮೇಶ ಚೆನ್ನಿಥಾಲಾ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಇವರು ಆಂದೋಲನ ಮಾಡುತ್ತಿರುವ ಮಹಿಳೆಯನ್ನು ಭೇಟಿಯಾದರು. ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಬಾಲಕಿಯರ ಮೇಲೆ ನಡೆದ ಕಥಿತ ದೌರ್ಜನ್ಯದ ಬಗ್ಗೆ ಕಣ್ಣೀರು ಸುರಿಸಿದವರು ಈ ಘಟನೆಯಿಂದ ಮೌನರಾಗಿದ್ದಾರೆ ಎಂದು ಅವರು ಹೇಳಿದರು.