ನ್ಯಾಯಾಧೀಶರು ಲೈಂಗಿಕ ಸಂವೇದನಶೀಲತೆಯ ಬಗ್ಗೆ ಜ್ಞಾನ ಪಡೆದುಕೊಳ್ಳುವ ಅಗತ್ಯವಿದೆ ! – ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್

ಮಧ್ಯಪ್ರದೇಶ ಉಚ್ಚ ನ್ಯಾಯಾಲಯದಿಂದ ಅತ್ಯಾಚರ ಪೀಡಿತೆಯಿಂದ ರಾಖಿ ಕಟ್ಟಿಸಿಕೊಳ್ಳುವ ಷರತ್ತಿನ ಮೇರೆಗೆ ಆರೋಪಿಗೆ ಜಾಮೀನು ನೀಡಿದ ಪ್ರಕರಣ

ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್

ನವ ದೆಹಲಿ – ನ್ಯಾಯಾಧೀಶರಿಗೆ ಲೈಂಗಿಕ ಸಂವೇದನಶೀಲತೆಯ ಬಗ್ಗೆ ಜ್ಞಾನ ನೀಡುವುದು ಅಗತ್ಯವಿದೆ. ಈ ಸಂವೇದನಾಶೀಲತೆ ಇದ್ದರೆ, ನ್ಯಾಯಾಧೀಶರು ಲೈಂಗಿಕ ಕಿರುಕುಳದ ಪ್ರಕರಣಗಳನ್ನು ಹೆಚ್ಚು ಸಂವೇದನಾಶೀಲವಾಗಿ ನಿರ್ವಹಿಸುವರು. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನ್ಯಾಯಾಂಗ ಅಕಾಡೆಮಿಗಳು ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಒಳಗೊಂಡಿರಬೇಕು, ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಈ ವಿಷಯವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ವ್ಯಕ್ತಪಡಿಸಿದ್ದಾರೆ. ಮಧ್ಯ ಪ್ರದೇಶದ ಉಚ್ಚ ನ್ಯಾಯಾಲಯವು ಜುಲೈ ತಿಂಗಳಲ್ಲಿ ಅತ್ಯಾಚಾರ ಎಸಗಿದ ಆರೋಪಿಗೆ ಪೀಡಿತೆ ಬಾಲಕಿಯಿಂದ ರಾಖಿ ಕಟ್ಟಿಸಿಕೊಳ್ಳುವಂತೆ ಷರತ್ತಿನ ಮೇರೆಗೆ ಜಾಮೀನು ನೀಡಿದ ಪ್ರಕರಣದಲ್ಲಿ ೯ ಮಹಿಳಾ ನ್ಯಾಯವಾದಿಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ನ್ಯಾಯಾಲಯವು ಅಟಾರ್ನಿ ಜನರಲ್‌ಗೆ ಸೂಚಿಸಿತ್ತು. ಅದರಂತೆ ವೇಣುಗೋಪಾಲ್ ತಮ್ಮ ಅಭಿಪ್ರಾಯಗಳನ್ನು ನ್ಯಾಯಾಲಯದಲ್ಲಿ ಮಂಡಿಸಿದರು. ‘ಇಂತಹ ಷರತ್ತುಗಳು ಕಾನೂನಿಗೆ ವಿರುದ್ಧವಾಗಿವೆ’, ಎಂದು ಮಹಿಳಾ ನ್ಯಾಯವಾದಿಗಳು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

೧. ಈ ಕುರಿತು ಮಧ್ಯಪ್ರದೇಶದ ಹೈಕೋರ್ಟ್‌ನ ನ್ಯಾಯಾಧೀಶರು ವ್ಯಕ್ತಪಡಿಸಿದ ಅಭಿಪ್ರಾಯ ಖಂಡನೀಯ ಎಂದು ವೇಣುಗೋಪಾಲ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಧೀಶರು ಭಾವನಾತ್ಮಕವಾಗಿ ತೀರ್ಪು ನೀಡಿದರು ಎಂದು ಹೇಳಿದ್ದಾರೆ.

೨. ಅಟಾರ್ನಿ ಜನರಲ್ ಅವರ ಅಭಿಪ್ರಾಯವನ್ನು ಆಲಿಸಿದ ನಂತರ, ನ್ಯಾಯಾಲಯವು ಈ ನಿಟ್ಟಿನಲ್ಲಿ ಹೇಳಿಕೆ ನೀಡುವಂತೆ ಆದೇಶಿಸುವ ಮೂಲಕ ಪ್ರಕರಣದ ವಿಚಾರಣೆಯನ್ನು ಮೂರು ವಾರಗಳ ನಂತರ ನಡೆಸಲಾಗುವುದು ಎಂದು ಹೇಳಿದರು.