ಕರ್ನಾಟಕದಲ್ಲಿ ಬಿಜೆಪಿ ನಾಯಕನ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವರ ಬಂಧನ

ಗೂಂಡಾಗಿರಿ ಮಾಡುವ ಕಾಂಗ್ರೆಸ್ ನಾಯಕರು ಎಂದಾದರೂ ಕಾನೂನಿನ ರಾಜ್ಯವನ್ನು ತರಬಹುದೇ ?

ಧಾರವಾಡ (ಕರ್ನಾಟಕ) – 2016 ರಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕರ್ನಾಟಕದ ಕಾಂಗ್ರೆಸ್ ನ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಬಂಧಿಸಿದೆ. ಜೂನ್ 15, 2016 ರಂದು ಗೌಡರನ್ನು ವ್ಯಾಯಾಮಶಾಲೆವೊಂದರಲ್ಲಿ ಐದು ಜನರು ಸೇರಿ ಹತ್ಯೆ ಮಾಡಿದ್ದರು. ಈ ಐವರೂ ಕುಲಕರ್ಣಿಯೊಂದಿಗೆ ಸಂಪರ್ಕದಲ್ಲಿದ್ದರು. ಆ ಸಮಯದಲ್ಲಿ ಕುಲಕರ್ಣಿ ರಾಜ್ಯದಲ್ಲಿ ಸಚಿವರಾಗಿದ್ದರು. ಆ ಸಮಯದಲ್ಲಿ ಅವರ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿತ್ತು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು.