
ಬಲಿಪಾಡ್ಯದಂದು ೫ ಬಣ್ಣಗಳ ರಂಗೋಲಿಯಿಂದ ಬಲಿ ಮತ್ತು ಅವನ ಪತ್ನಿ ವಿಂಧ್ಯಾವಲಿಯ ಚಿತ್ರಗಳನ್ನು ಬಿಡಿಸಿ ಅವರ ಪೂಜೆಯನ್ನು ಮಾಡುತ್ತಾರೆ. ನಂತರ ಬಲಿ ಪ್ರೀತ್ಯರ್ಥ ದೀಪ ಮತ್ತು ವಸ್ತ್ರಗಳ ದಾನವನ್ನು ಮಾಡುತ್ತಾರೆ. ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ. ಮಧ್ಯಾಹ್ನ ಬ್ರಾಹ್ಮಣರಿಗೆ ಭೋಜನವನ್ನು ನೀಡುತ್ತಾರೆ. ಈ ದಿನ ಪಕ್ವಾನ್ನದ ಭೋಜನ ಮಾಡುತ್ತಾರೆ. ಈ ದಿನ ಜನರು ಹೊಸ ಬಟ್ಟೆ ಬರೆಗಳನ್ನು ಧರಿಸಿ ಇಡೀ ದಿನವನ್ನು ಆನಂದದಲ್ಲಿ ಕಳೆಯುತ್ತಾರೆ. ಈ ದಿನ ಗೋವರ್ಧನ ಪೂಜೆಯನ್ನು ಮಾಡುವ ಪದ್ಧತಿಯಿದೆ. ಇದಕ್ಕಾಗಿ ಸೆಗಣಿಯ ಪರ್ವತವನ್ನು ಮಾಡಿ ಅದರ ಮೇಲೆ ಗರಿಕೆ ಮತ್ತು ಹೂವು ಗಳನ್ನು ಚುಚ್ಚುತ್ತಾರೆ. ಕೃಷ್ಣ, ಇಂದ್ರ, ಹಸು ಮತ್ತು ಕರುಗಳ ಚಿತ್ರ ಅಥವಾ ಮೂರ್ತಿಗಳನ್ನು ಜೊತೆಗಿಟ್ಟು, ಅವುಗಳನ್ನು ಪೂಜಿಸಿ ಮೆರವಣಿಗೆ ಮಾಡುತ್ತಾರೆ.
ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಬಿದಿಗೆ (ಅಕ್ಟೋಬರ್ ೨೩)
ಬಲಿಪಾಡ್ಯ (ಅಕ್ಟೋಬರ್ ೨೨)
ದೀಪಾವಳಿಯನ್ನು ಹೇಗೆ ಮತ್ತು ಯಾವ ರೀತಿಯಲ್ಲಿ ಆಚರಿಸಬೇಕು ?
ಸನಾತನ-ನಿರ್ಮಿತ ಶ್ರೀ ಲಕ್ಷ್ಮಿದೇವಿಯ ಸಾತ್ತ್ವಿಕ ಚಿತ್ರದ ವೈಶಿಷ್ಟ್ಯ
ದೀಪಜ್ಯೋತಿ ನಮೋಸ್ತುತೆ !
ಧನತ್ರಯೋದಶಿ ನಿಮಿತ್ತ ಧರ್ಮಪ್ರಸಾರದ ಕಾರ್ಯಕ್ಕೆ ‘ಸತ್ಪಾತ್ರೆ ದಾನ’ ಮಾಡಿ ಮತ್ತು ಶ್ರೀ ಲಕ್ಷ್ಮೀ ದೇವಿಯ ಕೃಪೆ ಸಂಪಾದಿಸಿ !