‘ಲವ್ ಜಿಹಾದ್’ ವಿರುದ್ಧ ಕಾನೂನು ರೂಪಿಸಲು ಉತ್ತರ ಪ್ರದೇಶ ಸರಕಾರದಿಂದ ಕಾನೂನು ಇಲಾಖೆಗೆ ಪ್ರಸ್ತಾವನೆ

ಉತ್ತರಪ್ರದೇಶದಲ್ಲಿ ಮಾತ್ರವಲ್ಲ ಕೇಂದ್ರದ ಬಿಜೆಪಿ ಸರಕಾರ ಇಡೀ ದೇಶದಲ್ಲಿ ಇಂತಹ ಕಾನೂನು ಜಾರಿಗೆ ತರಲು ಪ್ರಯತ್ನಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ‘ಲವ್ ಜಿಹಾದ್’ ವಿರುದ್ಧ ಕಾನೂನು ರೂಪಿಸಲು ಉತ್ತರ ಪ್ರದೇಶ ಸರಕಾರದ ಗೃಹ ಸಚಿವಾಲಯ ಕಾನೂನು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದೆ. ರಾಜ್ಯದಲ್ಲಿ ಲವ್ ಜಿಹಾದ್ ಘಟನೆಗಳು ಹೆಚ್ಚಾದ ಕಾರಣ ಕಾನೂನು ರೂಪಿಸಲು ಸರಕಾರ ನಿರ್ಧರಿಸಿದೆ. ಈ ಸಂಬಂಧ, ಈ ಪ್ರಸ್ತಾಪವನ್ನು ಕಳುಹಿಸಲಾಗಿದೆ.

ಅಲಹಾಬಾದ್ ಉಚ್ಚ ನ್ಯಾಯಾಲಯವು ಒಂದು ಪ್ರಕರಣದ ವಿಚಾರಣೆಯಲ್ಲಿ ಲವ್ ಜಿಹಾದ್ ಬಗ್ಗೆ ಪ್ರತಿಕ್ರಿಯಿಸುವಾಗ, ‘ಕೇವಲ ಮದುವೆಗಾಗಿ ಮಾತ್ರ ಮತಾಂತರವಾಗುವುದು ಕಾನೂನುಬಾಹಿರವಾಗಿದೆ.’ ಎಂದು ಹೇಳಿದೆ. ಈ ಹೇಳಿಕೆಯನ್ನು ಕಾನೂನು ನಿರ್ಮಿಸಲು ಬಳಸಬಹುದು, ಎಂದು ಹೇಳಲಾಗುತ್ತಿದೆ.