ಅಯೋಧ್ಯೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್’ ಎಂದು ಹೆಸರು !

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಅಯೋಧ್ಯೆಯಲ್ಲಿ ನಿರ್ಮಿಸಲಾಗುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ವಿಮಾನ ನಿಲ್ದಾಣ, ಅಯೋಧ್ಯಾ’ ಎಂದು ಹೆಸರಿಸುವ ಪ್ರಸ್ತಾವನೆಗೆ ಉತ್ತರ ಪ್ರದೇಶ ಸರ್ಕಾರದ ಸಂಪುಟ ಅನುಮೋದನೆ ನೀಡಿದೆ. ಈ ನಿಟ್ಟಿನಲ್ಲಿ, ರಾಜ್ಯ ವಿಧಾನಸಭೆಯಲ್ಲಿ ಅಂಗೀಕರಿಸಿದ ಪ್ರಸ್ತಾವಿತ ನಿರ್ಣಯದ ದಾಖಲೆಗಳನ್ನು ಕೂಡ ಅನುಮೋದಿಸಲಾಗಿದೆ.

ಈ ಪ್ರಸ್ತಾವನೆಯನ್ನು ರಾಜ್ಯ ವಿಧಾನಸಭೆಯು ಅಂಗೀಕರಿಸಿದ ನಂತರ ಕೇಂದ್ರದ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗುವುದು. ವಿಮಾನ ನಿಲ್ದಾಣಕ್ಕಾಗಿ ಸುಮಾರು ೬೦೦ ಎಕರೆ ಭೂಮಿಯನ್ನು ರಾಜ್ಯ ಸರಕಾರವು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನೀಡಲಿದೆ. ವಿಮಾನ ನಿಲ್ದಾಣ ಮತ್ತು ಇತರ ಅಗತ್ಯ ಸೌಲಭ್ಯಗಳಿಗಾಗಿ ೫೨೫ ಕೋಟಿ ರೂಪಾಯಿ ನೀಡಲು ಒಪ್ಪಿಗೆ ನೀಡಲಾಗಿದೆ.