ಬೆಳಗಾವಿ, ನವೆಂಬರ್ ೩೦ – ನಾವು ಹಿಂದೂ ಸಮುದಾಯದ ಯಾವುದೇ ವ್ಯಕ್ತಿಗೆ ಚುನಾವಣಾ ಟಿಕೆಟ್ ನೀಡಬಹುದು. ಕುರುಬಾ, ಲಿಂಗಾಯತ, ಒಕ್ಕಲಿಗಾ ಅಥವಾ ಬ್ರಾಹ್ಮಣ ಸಮುದಾಯದ ಯಾವುದೇ ವ್ಯಕ್ತಿಗೆ ಟಿಕೆಟ್ ನೀಡಬಹುದು; ಆದರೆ ಒಂದು ವಿಷಯ ಖಚಿತ, ನಾವು ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ ಎಂದು ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ (ಬಿಜೆಪಿ) ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಆ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
ಕೆ.ಎಸ್. ಈಶ್ವರಪ್ಪ ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, “ಬೆಳಗಾವಿಯು ಹಿಂದೂಗಳ ಕೇಂದ್ರವಾಗಿದೆ ಮತ್ತು ಅದನ್ನು ಬೆಂಬಲಿಸುವವರಿಗೆ ಮಾತ್ರ ಟಿಕೆಟ್ ನೀಡಲಾಗುವುದು. ಜನರ ವಿಶ್ವಾಸವನ್ನು ಗೆಲ್ಲಬಲ್ಲ ಅಭ್ಯರ್ಥಿಯನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ಆಯ್ಕೆ ಮಾಡುವರು. ಬಿಜೆಪಿ ಹೊರತುಪಡಿಸಿ ಬೇರೆ ಯಾವುದೇ ಪಕ್ಷದಲ್ಲಿ ಪ್ರಜಾಪ್ರಭುತ್ವ ಇಲ್ಲ.” ಎಂದು ಹೇಳಿದರು.