ಕೋಲಕಾತಾ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಸಿ.ಎಂ. ಕರ್ಣನ್ ಬಂಧನ

ನ್ಯಾಯಾಧೀಶರು ಮಹಿಳಾ ನ್ಯಾಯವಾದಿ ಮತ್ತು ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಾರೆ ಎಂದು ಆರೋಪ ಮಾಡಿದ ಪ್ರಕರಣ

ಚೆನ್ನೈ – ಸರ್ವೋಚ್ಚ ಹಾಗೂ ಉಚ್ಚ ನ್ಯಾಯಾಲಯದ ಕೆಲವು ನ್ಯಾಯಾಧೀಶರು ಮಹಿಳಾ ನ್ಯಾಯವಾದಿ ಹಾಗೂ ನ್ಯಾಯಾಲಯದ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಾರೆ, ಎಂದು ಆರೋಪಿಸಿದ ಪ್ರಕರಣದಲ್ಲಿ ಕೊಲಕಾತಾ ಉಚ್ಚ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಸಿ.ಎಂ. ಕರ್ಣನ್ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ನ್ಯಾಯಮೂರ್ತಿ ಕರ್ಣನ್ ಅವರು ಒಂದು ವಿಡಿಯೋದಲ್ಲಿ ಸಂತ್ರಸ್ಥ ಮಹಿಲೆಯ ಹೆಸರನ್ನು ಸಹ ಉಲ್ಲೇಖಿಸಿದ್ದಾರೆ. ಮದ್ರಾಸ್ ಉಚ್ಚ ನ್ಯಾಯಾಲಯದ ಮಹಿಳಾ ನ್ಯಾಯವಾದಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಅಕ್ಟೋಬರ್ ೨೭ ರಂದು ಚೆನ್ನೈ ಪೊಲೀಸ್ ಸೈಬರ್ ಸೆಲ್‌ನಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಕರ್ಣನ್ ಅವರು ನ್ಯಾಯಾಧೀಶರಾಗಿದ್ದಾಗಲೂ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು.

ಪೊಲೀಸ್ ಅಧಿಕಾರಿಗಳ ಮಾಹಿತಿಯ ಪ್ರಕಾರ, ಮದ್ರಾಸ್ ಉಚ್ಚ ನ್ಯಾಯಾಲಯದ ಕೆಲವು ಹಿರಿಯ ನ್ಯಾಯವಾದಿಗಳು ಕರ್ಣನ್ ವಿರುದ್ಧ ಮುಖ್ಯ ನ್ಯಾಯಮೂರ್ತಿ ಶರದ ಬೊಬಡೆ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಒಂದು ವಿಡಿಯೋ ಬಗ್ಗೆ ಉಲ್ಲೇಖವಿದೆ. ಅದರಲ್ಲಿ ಕರ್ಣನ್ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಜೊತೆಗೆ ನ್ಯಾಯಾಂಗ ಅಧಿಕಾರಿಗಳಿಗೂ ಬೆದರಿಕೆ ಹಾಕಿದ್ದಾರೆ. ನ್ಯಾಯಾಧೀಶರ ಪತ್ನಿಯರಿಗೆ ಅತ್ಯಾಚಾರದ ಬೆದರಿಕೆ ಹಾಕಲಾಗಿದೆ.