ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಅಪರಿಚಿತ ಕಾಯಿಲೆಯಿಂದ ಒಬ್ಬರು ಸಾವನ್ನಪ್ಪಿ, ೨೯೨ ಜನರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ

ಅಮರಾವತಿ (ಆಂಧ್ರಪ್ರದೇಶ) – ಇಡೀ ಜಗತ್ತು ಕೊರೋನಾ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ, ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಅಪರಿಚಿತ ಕಾಯಿಲೆಯಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ೨೯೨ ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ೧೪೦ ರೋಗಿಗಳಿಗೆ ಚಿಕಿತ್ಸೆ ನೀಡಿ ಮನೆಗೆ ಹೋಗಲು ಅವಕಾಶ ನೀಡಲಾಗಿದ್ದು, ಇತರರ ಸ್ಥಿತಿ ಸ್ಥಿರವಾಗಿದೆ.

ಈ ರೋಗದಿಂದ ಅಸ್ವಸ್ಥತೆ ಎನಿಸುವುದು, ಅಪಸ್ಮಾರ (ಫಿಟ್ಸ) ಇತ್ಯಾದಿ ತೊಂದರೆಗಳು ಆಗುತ್ತದೆ. ಅಪಸ್ಮಾರದಿಂದ ೪೫ ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.